Advertisement

ಕರ್ನಾಟಕ ಬಂದ್ ಗೆ ಹುಮನಾಬಾದ್ ಪಟ್ಟಣದಲ್ಲಿ ಬೆಂಬಲ

11:21 AM Mar 17, 2022 | Team Udayavani |

ಹುಮನಾಬಾದ: ಹಿಜಾಬ್ ಹಿನ್ನೆಲೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್, ಮುಸ್ಲಿಂ ಸಂಘಟನೆಗಳು ಗುರುವಾರ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟುಗಳು, ಶಾಲಾ ಕಾಲೇಜುಗಳು ಬಂದ್ ಮಾಡಿದ್ದಾರೆ.

Advertisement

ನ್ಯಾಯಕ್ಕಾಗಿ ಒತ್ತಾಯಿಸಿ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಆದೇಶ ಹೊರಡಿಸಿರುವ ಹಿನ್ಬೆಲೆಯಲ್ಲಿ ಪಟ್ಟಣದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಇಂದು ಯಾವುದೇ ವ್ಯವಹಾರ ನಡೆದಿಲ್ಲ. ಅಲ್ಲದೆ, ಪಟ್ಟಣದ ಮುಸ್ಲಿಂ ಸಮುದಾಯದ ಎಲ್ಲಾ ಅಂಗಡಿಗಳು ಬಂದ್ ಮಾಡಿರುವುದು ಕಂಡು ಬಂದಿದೆ ಮುಸ್ಲಿಂ ಆಡಳಿತ ಮಂಡಳಿ ಇರುವ ಶಾಲಾ, ಕಾಲೇಜುಗಳು ಕೂಡ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ ಇತರೆ ಸಮುದಾಯಗಳ ಜನರ ಅಂಗಡಿ ಬಾಗಿಲು ತೆರೆದಿದ್ದು ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ.

ಇದನ್ನೂ ಓದಿ:ಜೇಮ್ಸ್ ಚಿತ್ರ ಬಿಡುಗಡೆ: ಶೋ‌ ಹೌಸ್ ಫುಲ್, ಗದಗದಲ್ಲಿ ಅಭಿಮಾನಿಗಳ ಸಂಭ್ರಮ

ಮಾ.21ರ ವರೆಗೆ ಜಿಲ್ಲೆಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next