Advertisement
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ವೀರಶೈವ ಲಿಂಗಾಯತ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
Related Articles
Advertisement
ಪ್ರಥಮ ಅವಧಿಯಲ್ಲಿ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡವರು ಸಿದ್ದರಾಮಯ್ಯ. ಅಲ್ಲದೇ, ಅನೇಕ ಒಳ್ಳೆಯ ಕೆಲಸ ಕಾರ್ಯಗಳು ಕಾಂಗ್ರೆಸ್‌ನಲ್ಲಿ ಆಗಿದೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ತಮ್ಮನ್ನು ತೊಡಗಿಸಿಕೊಂಡಿರುವ ಸಂಸದ ಆರ್.ಧ್ರುವನಾರಾಯಣ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು ಎಂದರು.
ಸಂಸದ ಆರ್.ಧ್ರುವನಾರಾಯಣ, ದಿ.ಎಂ.ರಾಜಶೇಖರಮೂರ್ತಿ ಅವರು ತನ್ನ ರಾಜಕೀಯ ಗುರುಗಳು. ಅವರು ಹಾಕಿ ಕೊಟ್ಟ ಹಾದಿಯಲ್ಲಿ ಮುಂದುವರಿಯುತ್ತಿದ್ದೇನೆ. ಸದಾ ಕ್ಷೇತ್ರದ ಅಭಿವೃದ್ಧಿ, ಜನರ ಶ್ರೇಯೋಭಿವೃದ್ಧಿ ಬಯಸಿ ದುಡಿಯುತ್ತಿದ್ದೇನೆ.
ತನಗೆ 1994ರಲ್ಲಿ ದಿ.ಎಸ್.ಪುಟ್ಟಸ್ವಾಮಿ ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ನೀಡಿದ್ದರು. ಅಲ್ಲಿಂದ ರಾಜಕೀಯ ಜೀವನ ಆರಂಭಿಸಿ. ಕ್ಷೇತ್ರದ ಜನರ ಆಶೀರ್ವಾದದಿಂದ 2ಬಾರಿ ಶಾಸಕರಾಗಿ, 2ಬಾರಿ ಸಂಸದರಾಗಿ ಆಯ್ಕೆಯಾಗಲು ಮತದಾರರ ವಿಶ್ವಾಸವೇ ಕಾರಣವೆಂದರು.
ತನ್ನ 10 ವರ್ಷಗಳ ಅಧಿಕಾರದ ಅವಧಿಯಲ್ಲಿ ವೀರಶೈವ ಸಮಾಜದ ಮುಖಂಡರಿಗೆ ಸಾಧ್ಯವಾದಷ್ಟು ಅಧಿಕಾರ ಕಲ್ಪಿಸಿದ್ದೇನೆ. ನಮ್ಮ ಕ್ಯಾಪ್ಟನ್ ಆಗಿದ್ದ ಮಹದೇವಪ್ರಸಾದ್‌ರ ನಾಯಕತ್ವದಲ್ಲಿ 2ಬಾರಿ ಸಂಸದನಾಗಿ ಆಯ್ಕೆಯಾಗಿ, ಅವರ ಆಶಯದಂತೆ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆಂದರು.
ಈಗ, ಮತ್ತೂಮ್ಮೆ ಆಯ್ಕೆ ಬಯಸಿ, ನಿಮ್ಮಲ್ಲಿಗೆ ಬಂದಿದ್ದೇನೆ. ತಾವೆಲ್ಲರೂ ಒಗ್ಗಟ್ಟಿನಿಂದ ಬೆಂಬಲಿಸಿ ಮತ ನೀಡುವ ಜೊತೆಗೆ ಇತರ ಸಮುದಾಯಗಳ ಮತಗಳೂ ಕಾಂಗ್ರೆಸ್‌ಗೆ ಬರುವಂತೆ ಮಾಡಬೇಕೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಸಾಮಾಜಿಕ ಬದ್ಧತೆ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಸಂಸದ ಆರ್.ಧ್ರುವನಾರಾಯಣ ಅವರನ್ನು ಕಾಂಗ್ರೆಸ್‌ನ ವೀರಶೈವ ಹಾಗೂ ಲಿಂಗಾಯತ ಮುಖಂಡರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ಅಧ್ಯಕ್ಷ ಎಂ.ಗುರುಮಲ್ಲಪ್ಪ, ಜಿಪಂ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಮುಖಂಡರಾದ ಗಣೇಶ್ ಪ್ರಸಾದ್, ಪ್ರಭುಪ್ರಸಾದ್, ಸಿದ್ದಲಿಂಗಸ್ವಾಮಿ, ಬಿ.ಪುಟ್ಟಣ್ಣ, ಹಿರಿಬೇಗೂರು ಗುರುಸ್ವಾಮಿ ಮಾತನಾಡಿದರು.
ಜಿಪಂ ಸದಸ್ಯರಾದ ಕೆರೆಹಳ್ಳಿ ನವೀನ್, ಮಹೇಶ್, ಶಶಿಕಲಾ, ಚೆನ್ನಪ್ಪ, ಲೇಖಾ, ವೀರಶೈವ ಮಹಾಸಭಾ ಕೋಶಾಧ್ಯಕ್ಷ ಬಂಡಹಳ್ಳಿ ಶಿವಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಾಪಣ್ಣ, ಬ್ಲಾಕ್ ಅಧ್ಯಕ್ಷರಾದ ತೋಟೇಶ್, ಗುರುಸ್ವಾಮಿ, ರಾಜಶೇಖರ್, ಎಪಿಎಂಸಿ ಅಧ್ಯಕ್ಷ ಶಿವಶಂಕರಮೂರ್ತಿ, ಅಲ್ದೂರು ರಾಜಶೇಖರ್, ಆನಂದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲತಾ, ನಗರಸಭಾ ಮಾಜಿ ಅಧ್ಯಕ್ಷೆ ರೇಣುಕಾ, ಗೂಳಿಪುರ ನಾಗೇಂದ್ರ ಮತ್ತಿತರರಿದ್ದರು.