Advertisement

ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನಕ್ಕೆ ಕೈಜೋಡಿಸಿ

04:55 PM Oct 28, 2020 | Suhan S |

ಬಳ್ಳಾರಿ: ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷತೆ ದೃಷ್ಟಿಯಿಂದಾಗಿ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ವಿಮ್ಸ್‌ನ ವೈದ್ಯಶಾಸ್ತ್ರದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿ.ಎಂ.ಸುರೇಶ್‌ ಹೇಳಿದರು.

Advertisement

ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ರೆಡ್‌ ಕ್ರಾಸ್‌, ರೋಟರಿ ಲಯನ್ಸ್‌ ಕ್ಲಬ್‌ ಹಾಗೂ ಇತರೆ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ “”ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನ, ಸಾಮರ್ಥ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ” ಕುರಿತು ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಇಂದಿನ ಯುವಕರು ತಂಬಾಕು ಹಾಗೂ ಇತರೆ ಮಾದಕ ವಸ್ತುಗಳಿಂದ ದೂರವಿದ್ದು, ತಮ್ಮ ಗುರಿಯನ್ನು ತಲುಪುವುದಕ್ಕೆ ಅಗತ್ಯ ಶ್ರಮವಹಿಸಿ ಸಾಧನೆ ಮಾಡಬೇಕು ಎಂದು ಹೇಳಿದ ಅವರು ತಂಬಾಕು ಸೇವನೆಯಿಂದ ಮಾನವ ಸಂಕುಲದ ಮೇಲೆ ಉಂಟಾಗುವಅನೇಕ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು. ಸಂಪನ್ಮೂಲ ವ್ಯಕ್ತಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕರ್ತ ಎಸ್‌. ಭೋಜರಾಜ್‌ ಅವರು ತಂಬಾಕು ಉತ್ಪನ್ನಗಳ ಅಧಿ ನಿಯಮ 2003ರ ಸೆಕ್ಷನ್‌ 4, 5, 6ಎ, 6ಬಿ, ಮತ್ತು 7 ರ ನಿಯಂತ್ರಣಾ ಕಾಯ್ದೆಯ ಬಗ್ಗೆ ವಿವರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಡಾ| ಎಚ್‌.ಎಲ್‌. ಜನಾರ್ಧನ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮದ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಮರಿಯಂಬಿ, ರೆಡ್‌ಕ್ರಾಸ್‌ ಸಂಸ್ಥೆ ಕಾರ್ಯದರ್ಶಿ ಎಂ.ಎ.ಷಕೀಬ್‌, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಸಿಎ ರಾಜಶೇಖರ್‌, ರೋಟರಿ ಕ್ಲಬ್‌ ಅಧ್ಯಕ್ಷ ಕೆ.ಎಂ.ಶಿವ ಕುಮಾರ್‌ ಸೇರಿದಂತೆ ಶಮೀಮ್‌ ಜಕಾಲಿ, ಖಾಜಾ ಮೈನುದ್ದೀನ್‌, ಶಿವಸಾಗರ್‌ ಮತ್ತು ಮಂಜುನಾಥ ಹಾಗೂ ಪೌರರಕ್ಷಣಾದಳ ಘಟಕಾಧಿಕಾರಿಗಳಾದ ಬಸವರಾಜ ಹಾಗೂ ಸಿಬ್ಬಂದಿ ವರ್ಗ, ಗೃಹ ರಕ್ಷಕದಳದ ಘಟಕಾಧಿಕಾರಿಗಳಾದ ಸುರೇಶ್‌ ಮತ್ತು ಬಸವಲಿಂಗ ಹಾಗೂ ಸಿಬ್ಬಂದಿ ವರ್ಗದವರು, ರೆಡ್‌ ಕ್ರಾಸ್‌ ಸ್ವಯಂಸೇವಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next