ಬೆಂಗಳೂರು: ಶಾಂತಿನಗರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್.ಎ.ಹ್ಯಾರಿಸ್ ಸೋಮವಾರ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ದೊಮ್ಮಲೂರಿನ ಗಣೇಶ ದೇವಾಲಯ ಮತ್ತು ಸೂರ್ಯನಾರಾಯಣ ದೇವಾಲಯ, ಜೋಗುಪಾಳ್ಯದ ಸುಬ್ರಹ್ಮಣ್ಯ ದೇವಾಲಯ ಮತ್ತು ಸೋಮೇಶ್ವರ ದೇವಾಲಯ, ಶಾಂತಿನಗರದಲ್ಲಿರುವ ಗಣೇಶ ದೇವಾಲಯ, ವನ್ನಾರಪೇಟೆಯಲ್ಲಿರುವ ವೆಲ್ಲಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಇನೆ#ಂಟ್ ಜೀಸಸ್ ಚರ್ಚ್, ಮದ್ರಾಸಾ ಕಾಶಿಫ್ ಉಲೂಮ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ನೀಲಸಂದ್ರದ ದುರ್ಗಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆಸ್ಟಿನ್ ಟೌನ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಷ್ಟ ಕಾಲದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್,
ಎಐಸಿಸಿ ಕಾರ್ಯದರ್ಶಿ ಮಧು ಯಕ್ಷಿಗೌಡ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್, ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಸೇರಿದಂತೆ ಎಲ್ಲ ನಾಯಕರು ಬೆಂಬಲಕ್ಕೆ ನಿಂತು ಅಭ್ಯರ್ಥಿಯಾಗಲು ಸಹಕರಿಸಿದ್ದಾರೆ. ಎಲ್ಲರಿಗೂ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಹತ್ತು ವರ್ಷಗಳಲ್ಲಿ ಮಾಡಿರುವ ಸೇವೆ ನನಗೆ ಶ್ರೀರಕ್ಷೆ. ನನ್ನ ಕ್ಷೇತ್ರದ ಜನತೆ ನನ್ನ ಕೈ ಬಿಡುವುದಿಲ್ಲ ಎಂದು ನಂಬಿಕೆಯಿದೆ. ಬಿ ಪ್ಯಾಕ್ ನಡೆಸಿದ ಸಮೀಕ್ಷೆಯಲ್ಲೂ ಉತ್ತಮ ಶಾಸಕ ಎಂದು ಜನರಿಂದ ಸ್ಪಂದನೆ ದೊರೆತಿದೆ ಎಂದು ತಿಳಿಸಿದರು.