Advertisement

ದೆಹಲಿಯ ರೈತ ಹೋರಾಟಕ್ಕೆ ಬೆಂಬಲ; ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ನಡೆಸಿದ ರೈತರು

08:52 PM Dec 02, 2020 | mahesh |

ಚಿಕ್ಕಬಳ್ಳಾಪುರ: ದೆಹಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಕಾರ್ಯಕರ್ತರು ನಗರದ ವಾಪಸಂದ್ರ ರಾಷ್ಟ್ರೀಯ ಹೆದ್ದಾರಿ 7 ತಡೆದು ಪ್ರತಿಭಟನೆ ನಡೆಸಿದರು.

Advertisement

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 7 ತಡೆದು ಧರಣಿ ನಡೆಸಿದ ರೈತ ಸಂಘದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರಮೋದಿ ಮುತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುಧ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ ದೇಶದ 74 ವರ್ಷಗಳ ಇತಿಹಾಸದಲ್ಲಿ ದೊಡ್ಡಮೊಟ್ಟದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ವಿರೋಧಿ ಧೋರಣೆಯನ್ನು ಅನುಸರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

96 ಸಾವಿರ ಟ್ರಕ್‍ಗಳು ಮತ್ತು 1.25 ಕೋಟಿ ರೈತರು ಬೀದಿಗಿಳಿದು ಹೋರಾಟ ನಡೆಸಿದರು ಸಹ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಗಳು ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವ ಬದಲಿಗೆ ರೈತರ ಹೋರಾಟವನ್ನು ಪೋಲಿಸರು ಮತ್ತು ಮಿಲಿಟರಿ ಮೂಲಕ ಹತ್ತಿಕ್ಕುವ ಕೆಲಸವನ್ನು ಮಾಡಿದ್ದಾರೆ ಅನ್ನದಾತ ರೈತ ಸಿಡಿದರೆ ಸರ್ಕಾರಗಳು ಧೂಳಿಪಟವಾಗಿರುವ ನಿದರ್ಶನಗಳು ನಡೆದಿವೆ ರೈತರ ಸಮಸ್ಯೆಗಳನ್ನು ಆಲಿಸುವ ಸೌಜನ್ಯವನ್ನು ಪ್ರಧಾನಮಂತ್ರಿ ತೋರಿಸಿಲ್ಲ ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲದಂತಾಗಿದೆ ದೇಶದ ರಾಜಕೀಯ ಇತಿಹಾಸದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲವೆಂದು ಕಿಡಿಕಾರಿದರು.

ವಾಪಸಂದ್ರದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಧರಣಿ ನಡೆಸಿದ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಸುಮಾರು 80 ಮಂದಿ ರೈತರನ್ನು ಬಂಧಿಸಿ ಚಿಕ್ಕಬಳ್ಳಾಪುರ ನಗರ ಪೋಲಿಸ್‍ಠಾಣೆಯಲ್ಲಿ ಬಿಡುಗಡೆಗೊಳಿಸಿದರು.

Advertisement

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್,ಕಾರ್ಯದರ್ಶಿ ವೇಣುಗೋಪಾಲ್,ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ,,ಮಹಿಳಾ ಘಟಕದ ರಾಜ್ಯ ಸಂಚಾಲಕಿ ಉಮಾ,ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್,ಉಪಾಧ್ಯಕ್ಷ ಮುನಿನಂಜಪ್ಪ,ಕಾರ್ಯದರ್ಶಿ ಬಸವರಾಜು,ಗುಡಿಹಳ್ಳಿ ಕೆಂಪಣ್ಣ,ಗುಡಿಬಂಡೆ ತಾಲೂಕು ಅಧ್ಯಕ್ಷ ಮುರಳಿ,ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಬೈಯಪ್ಪರೆಡ್ಡಿ,ಗೌರಿಬಿದನೂರು ತಾಲೂಕು ಅಧ್ಯಕ್ಷ ಮಾಳಪ್ಪ,ಚೇಳೂರು ತಾಲೂಕು ಅಧ್ಯಕ್ಷ ಬೈಯಪ್ಪ,ಚಿಕ್ಕಬಳ್ಳಾಪುರ ತಾಲೂಕು ಕಾರ್ಯದರ್ಶಿ ದೇವರಾಜ್,ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ಡಿವೈಎಸ್ಪಿ ರವಿಶಂಕರ್ ಅವರ ನೇತೃತ್ವದಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next