Advertisement
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಸಮ್ಮತಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ. ಕ್ವಿಂಟಾಲ್ ಗೆ 6,783 ರೂ. ಬೆಲೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಬೆಲೆ ಕುಸಿತದ ಸಂದರ್ಭ ರೈತರ ನೆರವಿಗೆ ಧಾವಿಸಲು ರಾಜ್ಯ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು. ಶೇಂಗಾ ಖರೀದಿಗೆ ಕೇಂದ್ರ ಸರಕಾರದಿಂದ 2, ರಾಜ್ಯ ಸರಕಾರದಿಂದ 4 ಏಜೆನ್ಸಿಗಳನ್ನು ಗುರುತಿಸಲಾಗಿದೆ. ಆವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ, ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಕಾರ್ಯಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದರು.