Advertisement

ಸೋಯಾಬಿನ್‌ಗೆ ಬೆಂಬಲ ಬೆಲೆ

10:24 PM Nov 11, 2019 | Lakshmi GovindaRaju |

ಬೆಂಗಳೂರು: ರಾಜ್ಯದಲ್ಲಿ ಬೆಳೆದಿರುವ ಸೋಯಾಬಿನ್‌ನ್ನು ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಬೆಳೆದ ಸೋಯಾಬಿನ್‌ ಬೆಳೆಗೆ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೋಯಾಬಿನ್‌ ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಮುಂಗಾರಿನಲ್ಲಿ 2019-20 ನೇ ಸಾಲಿನಲ್ಲಿ ಬೆಳೆದ ಸೋಯಾಬಿನ್‌ ಬೆಳೆಯನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಲು ನಿರ್ಧರಿಸಿದೆ.

Advertisement

ಈ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, 64,125 ಮೆಟ್ರಿಕ್‌ ಟನ್‌ ಸೋಯಾಬಿನ್‌ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಲು ಸೂಚಿಸಲಾಗಿದೆ. 15 ದಿನಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿ 90 ದಿನಗಳವರೆಗೆ ಸೊಯಾಬಿನ್‌ ಖರೀದಿಸಲು ಸೂಚಿಸಲಾಗಿದೆ. ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಿರುವ ಸೋಯಾಬಿನ್‌ ದಾಸ್ತಾನು ಮಾಡಲು ರಾಜ್ಯ ಸರ್ಕಾರ ಸೂಕ್ತ ದಾಸ್ತಾನು ಮಳಿಗೆಗಳನ್ನು ಹೊಂದುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next