Advertisement
ಪಟ್ಟಣದ ಒಕ್ಕಲಿಗ ಸಮುದಾಯಭವನದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಹಾಸನ ಜಿಲ್ಲೆಯಲ್ಲಿ ಕುಟುಂಬ ರಾಜಕೀಯ ನಡೆಯುತ್ತಿದ್ದು ಇದಕ್ಕೆ ಮತದಾರರು ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.
Related Articles
Advertisement
ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಲು, ಈ ದೇಶದ ರಕ್ಷಣೆಗಾಗಿ ಬಿಜೆಪಿಯ ಪರ ಪ್ರತಿಯೊಬ್ಬರು ವೈಮನಸ್ಸು ತೊರೆದು ಒಟ್ಟಾಗಿ ಕೆಲಸ ಮಾಡಬೇಕು ಹಾಗೂ ಸೋಮವಾರ ನಡೆಯಲಿರುವ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ವಿಧಾನಪರಿಷತ್ ಸದಸ್ಯ ಪ್ರಾಣೇಶ್ ಮಾತನಾಡಿ, ಮೋದಿರವರು ಮತ್ತೂಮ್ಮೆ ಪ್ರಧಾನಿಯಾಗದಿದ್ದಲ್ಲಿ ಅವರಿಗೆ ನಷ್ಟವಿಲ್ಲ, ಆದರೆ ಈ ದೇಶಕ್ಕೆ ನಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ದೇಶದ ಉಳಿವಿಗಾಗಿ ನಾವು ಮೋದಿರವರ ಪರ ಕೆಲಸ ಮಾಡಿ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜಣ್ಣನವರನ್ನು ಗೆಲ್ಲಿಸುವ ಕೆಲಸ ಮಾಡೋಣ ಎಂದರು.
ಕುಟುಂಬ ರಾಜಕಾರಣದಿಂದ ಜನ ಬೇಸತ್ತಿದ್ದು ಈ ಬಾರಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಈ ಹಿಂದೆ ವಾಜಪೇಯಿಯವರು ಪ್ರಧಾನಿ ಮಂತ್ರಿಯಾಗಿದ್ದಾಗ ಬೇರೆ ಯಾರೂ ಮಾಡದ ಅಭಿವೃದ್ಧಿ ಕೆಲಸಗಳನ್ನು ಮಾಡಿದರು. ಕಾರ್ಯಕರ್ತರು ಅತಿಯಾದ ಆತ್ಮವಿಶ್ವಾಸದಿಂದ ಮೈಮರೆತ ಕಾರಣ ಅವರು ಸೋಲನ್ನಭವಿಸಬೇಕಾಯಿತು. ಆದರೆ ಈ ಬಾರಿ ಈ ರೀತಿಯಾಗಬಾರದು ಎಲ್ಲಾರು ಒಟ್ಟಾಗಿ ಕಾಂಗ್ರೆಸ್ ಮತಗಳನ್ನು ಸೆಳೆಯುವ ಪ್ರಯತ್ನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರೈತ ಮೋರ್ಚಾ ಅಧ್ಯಕ್ಷ ಬೆಣ್ಣೂರು ರೇಣುಕುಮಾರ್, ಮಾಜಿ ಶಾಸಕ ಬಿ.ಆರ್ ಗುರುದೇವ್, ಹಿಂದುಳಿದ ವರ್ಗಗಳ ಅಧ್ಯಕ್ಷ ಲಕ್ಷ್ಮಣ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರತಾಪ್, ಆಲೂರು ಮಂಡಲ ಅಧ್ಯಕ್ಷ ಲೋಕೇಶ್, ಹಾಸನ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಾಗೇಶ್, ಸಕಲೇಶಪುರ ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಅಮಿತ್ ಶೆಟ್ಟಿ, ಪುರಸಭಾ ಸದಸ್ಯರುಗಳಾದ ವನಜಾಕ್ಷಿ, ರೇಖಾ ರುದ್ರಕುಮಾರ್, ಪಕ್ಷದ ಮುಖಂಡರುಗಳಾದ ಶಾಂತ ಸುಧೀರ್, ಜೈಮಾರುತಿ ದೇವರಾಜ್, ಅವರೆಕಾಡು ಪೃಥ್ವಿ, ಧರ್ಮರಾಜ್, ಲೋಹಿತ್ ಜಂಭರ್ಡಿ, ದೀಪಕ್, ದುಷ್ಯಂತ್, ಸೇರಿದಂತೆ ಇನ್ನು ಅನೇಕರು ಹಾಜರಿದ್ದರು.