Advertisement

ಬೆಂಬಲಿಗರ ಆಕ್ರೋಶ, ಪ್ರತಿಭಟನೆ

11:40 PM Aug 20, 2019 | Team Udayavani |

ಚಿತ್ರದುರ್ಗ/ಹೊಸದುರ್ಗ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹಾಗೂ ಗೂಳಿಹಟ್ಟಿ ಶೇಖರ್‌ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಅವರ ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿ,ಪಕ್ಷದ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

ಚಿತ್ರದುರ್ಗ ನಗರದ ಗಾಂಧಿ  ವೃತ್ತದಲ್ಲಿ ಜಿ.ಎಚ್‌.ತಿಪ್ಪಾರೆಡ್ಡಿ ಬೆಂಬಲಿಗರು ಪ್ರತಿಭಟನೆ ನಡೆಸಿ ಬೈಕ್‌ಗೆ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

ಶಾಸಕ ಗೂಳಿಹಟ್ಟಿ ಶೇಖರ್‌ ಅವರಿಗೆ ಮಂತ್ರಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಮಂಗಳವಾರ ಮಧ್ಯಾಹ್ನ ಹೊಸದುರ್ಗ ಪಟ್ಟಣದ ಟಿ.ಬಿ.ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ನಂತರ, ಶಾಸಕರು ಮನವಿ ಮಾಡಿದ್ದರಿಂದ ಪ್ರತಿಭಟನೆಯನ್ನು ಹಿಂಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next