Advertisement
ಬುಧವಾರದಂದು, ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಅಫಿಡವಿಟ್ ಸಲ್ಲಿಸಿರುವ ಉತ್ತರ ಪ್ರದೇಶ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಜನರನ್ನು ಬಂಧಿಸಿರುವುದಾಗಿ ತಿಳಿಸಿದೆ. ಜೊತೆಗೆ, ಪ್ರತಿಭಟನಾ ನಿರತ ರೈತರು ಮೂವರನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದೂ ಇದೇ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಉಲ್ಲೇಖೀಸಿದೆ.ಅಫಿಡವಿಟ್ ಸ್ವೀಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, ಪ್ರಕರಣದಲ್ಲಿ ಲಭ್ಯವಿರುವ ಎಲ್ಲಾ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯನ್ನು ಪ್ರಕರಣಕ್ಕೆ ಸಂಬಂಧಿಸಿದ ಜಿಲ್ಲಾ ನ್ಯಾಯಾಧೀಶರಿಗೆ ಖುದ್ದಾಗಿ ಸಲ್ಲಿಸಬೇಕೆಂದು ಸೂಚಿಸಿತು.