Advertisement

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

08:16 PM Oct 20, 2021 | Team Udayavani |

ನವದೆಹಲಿ : ಇದೇ ತಿಂಗಳ 3ರಂದು ಉತ್ತರ ಪ್ರದೇಶದ ಲಾಖೀಂಪುರದಲ್ಲಿ ಪ್ರತಿಭಟನಾ ನಿರತರ ರೈತರ ಮೇಲೆ ಕಾರು ಚಲಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ, ಅಂತ್ಯವಿಲ್ಲದ ತನಿಖೆಯಂತಾಗಬಾರದು ಎಂದು ಸುಪ್ರೀಂ ಕೋರ್ಟ್‌, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚ್ಯವಾಗಿ ಹೇಳಿದೆ. ಅಲ್ಲದೆ, ಪ್ರಕರಣದ ತನಿಖೆಯ ಪ್ರಗತಿಯ ವರದಿಯನ್ನು ಅ. 27ರೊಳಗ್ಗೆ ಸಲ್ಲಿಸುವಂತೆ ತಿಳಿಸಿದೆ.

Advertisement

ಬುಧವಾರದಂದು, ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಅಫಿಡವಿಟ್‌ ಸಲ್ಲಿಸಿರುವ ಉತ್ತರ ಪ್ರದೇಶ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಜನರನ್ನು ಬಂಧಿಸಿರುವುದಾಗಿ ತಿಳಿಸಿದೆ. ಜೊತೆಗೆ, ಪ್ರತಿಭಟನಾ ನಿರತ ರೈತರು ಮೂವರನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದೂ ಇದೇ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಉಲ್ಲೇಖೀಸಿದೆ.
ಅಫಿಡವಿಟ್‌ ಸ್ವೀಕರಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠ, ಪ್ರಕರಣದಲ್ಲಿ ಲಭ್ಯವಿರುವ ಎಲ್ಲಾ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯನ್ನು ಪ್ರಕರಣಕ್ಕೆ ಸಂಬಂಧಿಸಿದ ಜಿಲ್ಲಾ ನ್ಯಾಯಾಧೀಶರಿಗೆ ಖುದ್ದಾಗಿ ಸಲ್ಲಿಸಬೇಕೆಂದು ಸೂಚಿಸಿತು.

ಇದನ್ನೂ ಓದಿ :ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

Advertisement

Udayavani is now on Telegram. Click here to join our channel and stay updated with the latest news.

Next