Advertisement

ಅಲ್ಪಸಂಖ್ಯಾತ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

11:22 AM Oct 07, 2022 | sudhir |

ಹೊಸದಿಲ್ಲಿ: ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ­ಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿ­ದ್ದರೆ, ಅಂಥ ಶಿಕ್ಷಣ ಸಂಸ್ಥೆಗಳು ಅನಂತರದಲ್ಲಿ “ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ’ ಎಂಬ ಸ್ಥಾನಮಾನ ಪಡೆಯುವ ಸಾಧ್ಯತೆಯಿದೆಯೇ ಎಂಬ ಬಗ್ಗೆ ಪರಿ­ಶೀಲಿಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ.

Advertisement

ಜತೆಗೆ ಈ ಕುರಿತು ಪ್ರತಿ­ಕ್ರಿಯೆ ನೀಡುವಂತೆ ಉತ್ತರಪ್ರದೇಶ ಸರಕಾರ, ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗ, ರಾಷ್ಟ್ರೀಯ ವೈದ್ಯಕೀಯ ಆಯೋಗ ಮತ್ತು ಇತರರಿಗೆ ನೋಟಿಸ್‌ ಕೂಡ ಜಾರಿ ಮಾಡಿದೆ.

ಯಾವುದೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿದ್ದಾರೆ ಎಂಬ ಮಾತ್ರಕ್ಕೆ ಅದು “ಅಲ್ಪಸಂಖ್ಯಾತ ಸಂಸ್ಥೆ’ ಎಂದು ಪರಿಗಣಿಸಲ್ಪಡುವುದಿಲ್ಲ ಎಂಬ ಅಲಹಾ­ಬಾದ್‌ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ, ಮಹಾಯಾಣ ಥೇರವಾಡ ವಜ್ರಯಾನ ಬುದ್ಧಿಸ್ಟ್‌ ರಿಲೀಜಿಯಸ್‌ ಆ್ಯಂಡ್‌ ಚಾರಿಟೆಬಲ್‌ ಟ್ರಸ್ಟ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆ ಅರ್ಜಿಯನ್ನು ಗುರುವಾರ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ| ಬಿ.ಆರ್‌. ಗವಾಯಿ ಮತ್ತು ನ್ಯಾ| ಬಿ.ವಿ. ನಾಗರತ್ನಾ ಅವರನ್ನೊಳಗೊಂಡ ನ್ಯಾಯಪೀಠ, ಈ ಕುರಿತು ಪರಿಶೀಲಿಸಲು ಸಮ್ಮತಿಸಿದೆ.

ಇದನ್ನೂ ಓದಿ : ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

Advertisement

Udayavani is now on Telegram. Click here to join our channel and stay updated with the latest news.

Next