ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು ಇರುವ ಕೊಲಿಜಿಯಂ ವ್ಯವಸ್ಥೆ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಗೆ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಸಮ್ಮತಿ ಸೂಚಿಸಿತು.
ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಪುನರು ಜ್ಜೀವನ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಇದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು ನ್ಯಾಯಾಂಗದ ಜತೆಗೆ ಸರ್ಕಾರಕ್ಕೂ ಸಮಾನ ಪಾತ್ರವನ್ನು ವಹಿಸಿದೆ.
2015ರ ನಂತರ ಕೊಲಿಜಿಯಂ ಪದ್ಧತಿ ಜಾರಿಗೆ ಬಂದಿದೆ. “ಕೊಲಿಜಿಯಂ ವ್ಯವಸ್ಥೆಯು ಅಪಾರದರ್ಶಕವಾಗಿದ್ದು, ನ್ಯಾಯ ಮೂರ್ತಿಗಳ ನೇಮಕದಲ್ಲಿ ದೊಡ್ಡ ರಾಜಕೀಯ ನಡೆಯುತ್ತದೆ,’ ಎಂದು ಇತ್ತೀಚೆಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟೀಕಿಸಿದ್ದರು.