Advertisement

ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

09:42 AM Aug 28, 2019 | Nagendra Trasi |

ನವದೆಹಲಿ: ಅನರ್ಹ ಶಾಸಕರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಂಗಳವಾರ ಸಮ್ಮತಿ ಸೂಚಿಸಿದೆ.

Advertisement

ನಿನ್ನೆಯಷ್ಟೇ ಸುಪ್ರೀಂಕೋರ್ಟ್ ನ ನ್ಯಾ.ಎನ್.ವಿ.ರಮಣ ಅವರನ್ನೊಳಗೊಂಡ ಪೀಠ ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿತ್ತು. ಇಂದು ಮತ್ತೆ ಅನರ್ಹ ಶಾಸಕರ ಪರ ವಕೀಲರಾದ ಗಿರಿ ಅವರು ನ್ಯಾ.ಎನ್.ವಿ.ರಮಣ ಅವರ ಪೀಠ ಅರ್ಜಿ ತುರ್ತು ವಿಚಾರಣೆಗೆ ಒಪ್ಪಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

17 ಮಂದಿ ಅನರ್ಹ ಶಾಸಕರು ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತ್ವರಿತ ವಿಚಾರಣೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಒಪ್ಪಿಗೆ ಸೂಚಿಸಿದ ಸುಪ್ರೀಂಪೀಠ, ರಿಜಿಸ್ಟ್ರಾರ್ ಅವರಿಗೆ ಅರ್ಜಿಯನ್ನು ಲಿಸ್ಟ್ ಮಾಡುವಂತೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next