ನವದೆಹಲಿ: ಮೇ 2ರಂದು ಉತ್ತರಪ್ರದೇಶದ ಗ್ರಾಮಪಂಚಾಯತ್ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಸಲು ಸುಪ್ರೀಂಕೋರ್ಟ್ ಶನಿವಾರ(ಮೇ 1) ಅನುಮತಿ ನೀಡಿದೆ. ಮತಎಣಿಕೆ ಕೇಂದ್ರಗಳಲ್ಲಿ ಕೋವಿಡ್ 19 ಮಾರ್ಗಸೂಚಿಯಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಭರವಸೆ ನೀಡಿದ ನಂತರ ಸುಪ್ರೀಂಕೋರ್ಟ್ ಈ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ : ದಂಡ ಕಟ್ಟಲು ಹೇಳಿದ ಕಾರಣಕ್ಕೆ ಟ್ರಾಫಿಕ್ ಎಸ್ ಐಗೆ ಆವಾಜ್ ಹಾಕಿದ ಮಹಿಳೆ.!
ಚುನಾವಣಾ ಆಯೋಗ ಸಲ್ಲಿಸಿದ ಮನವಿಯನ್ನು ಜಸ್ಟೀಸ್ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠ, ಪ್ರತಿ ಮತಎಣಿಕೆ ಕೇಂದ್ರದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಕ್ಲಾಸ್ ಒನ್ ಗಜೆಟೆಡ್ ಅಧಿಕಾರಿಯ ಹೊಣೆಯಾಗಿದೆ ಎಂದು ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಯಾವುದೇ ಕಾರಣಕ್ಕೂ ಉತ್ತರಪ್ರದೇಶದಾದ್ಯಂತ ಫಲಿತಾಂಶದ ನಂತರ ವಿಜಯೋತ್ಸವ ಆಚರಿಸಲು ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಪೀಠ ನಿರ್ದೇಶನ ನೀಡಿದೆ. ಮತಎಣಿಕೆಯ ಕೇಂದ್ರದ ಪ್ರಕ್ರಿಯೆಯನ್ನು ಸಿಸಿಟಿವಿ ರೆಕಾರ್ಡಿಂಗ್ ಮಾಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ತಿಳಿಸಿದೆ.
ಉತ್ತರಪ್ರದೇಶ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ದಿನದಂದು ಕೋವಿಡ್ 19 ನಿರ್ಬಂಧ ಮತ್ತು ಮಾರ್ಗಸೂಚಿಯನ್ನು ಅನುಸರಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ನಂತರ ಈ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.