ನವದೆಹಲಿ: ಪ್ರಾಣಿ ಹಿಂಸೆ ನಿಗ್ರಹ ಕಾಯ್ದೆಗೆ ತಂದ ತಿದ್ದುಪಡಿ ಅನ್ವಯ ಎತ್ತಿನಬಂಡಿ ಸ್ಪರ್ಧೆ ಆಯೋಜಿಸಲು ಸುಪ್ರೀಂಕೋರ್ಟ್ ಗುರುವಾರ(ಡಿಸೆಂಬರ್ 16) ಮಹಾರಾಷ್ಟ್ರ ಸರ್ಕಾರಕ್ಕೆ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿಗಳಿಂದ 6 ಲಕ್ಷ ರೂ. ದರೋಡೆ
ರಾಜ್ಯದಲ್ಲಿ ಎತ್ತಿನಬಂಡಿ ಸ್ಪರ್ಧೆ ನಡೆಸುವಂತಿಲ್ಲ ಎಂದು 2018ರಲ್ಲಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಜಸ್ಟೀಸ್ ಎ.ಎಂ.ಖಾನ್ವಿಲಾರ್ ಮತ್ತು ಜಸ್ಟೀಸ್ ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠ ನಡೆಸಿದೆ.
ತಮಿಳುನಾಡು ಮತ್ತು ಕರ್ನಾಟಕದಲ್ಲಿ ನಿಷೇಧವನ್ನು ತೆಗೆದುಹಾಕಿದಂತೆ ಮಹಾರಾಷ್ಟ್ರದಲ್ಲಿಯೂ ಎತ್ತಿನ ಬಂಡಿ ಸ್ಪರ್ಧೆಯ ಮೇಲಿನ ನಿಷೇಧವನ್ನು ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ಬುಧವಾರ (ಡಿಸೆಂಬರ್ 15) ಸುಪ್ರೀಂಕೋರ್ಟ್ ಗೆ ಮನವಿ ಮಾಡಿಕೊಂಡಿತ್ತು.
2017ರ ಕಾನೂನಿನಂತೆ ರಾಜ್ಯದಲ್ಲಿ ಎತ್ತಿನಬಂಡಿ ಸ್ಪರ್ಧೆ ನಡೆಸಲು ಅವಕಾಶ ನೀಡಬೇಕೆಂದು ಮಹಾರಾಷ್ಟ್ರ ಸರ್ಕಾರ ವಾದ ಮಂಡಿಸಿತ್ತು. ಎತ್ತಿನ ಬಂಡಿ ಸ್ಪರ್ಧೆಗೆ ವಿಧಿಸಿದ್ದ ನಿಷೇಧವನ್ನು ತೆಗೆದುಹಾಕಬೇಕು ಮತ್ತು 2017ರ ಕಾನೂನಿನ್ವಯ ಎತ್ತಿನಬಂಡಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಮಹಾರಾಷ್ಟ್ರ ಸರ್ಕಾರ ಪರ ವಾದಿಸಿದ್ದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಮನವಿ ಮಾಡಿಕೊಂಡಿದ್ದರು.