Advertisement

ಮತ್ತೊಂದು ನೀಟ್‌ ಪರೀಕ್ಷೆಗೆ ಸುಪ್ರೀಂಕೋರ್ಟ್‌ ಅನುಮತಿ

01:04 AM May 11, 2019 | Lakshmi GovindaRaj |

ನವದೆಹಲಿ: ಹಂಪಿ ಎಕ್ಸ್‌ಪ್ರೆಸ್‌ ರೈಲು ವಿಳಂಬದಿಂದಾಗಿ ಮೇ 5 ರಂದು ನೀಟ್‌ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೂಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಕ್ಕೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ.

Advertisement

ಕರ್ನಾಟಕವಷ್ಟೇ ಅಲ್ಲ, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲೂ ಮೇ 20 ರಂದು ನೀಟ್‌ ನಡೆಯಲಿದೆ. ಕರ್ನಾಟಕದಲ್ಲಿ ಈಗಾಗಲೇ ಮೇ 20 ರಂದು ಪರೀಕ್ಷೆ ನಡೆಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. 2018ರ ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಮರುಪರೀಕ್ಷೆ ನಡೆಸಲು ಔಪಚಾರಿಕ ಅನುಮತಿಯನ್ನು ಎನ್‌ಟಿಎ ಪಡೆದುಕೊಂಡಿದೆ.

ಮೇ 5 ರಂದು ಹಂಪಿ ಎಕ್ಸ್‌ಪ್ರೆಸ್‌ ಸುಮಾರು 7 ತಾಸುಗಳವರೆಗೆ ವಿಳಂಬವಾದ್ದರಿಂದ ಉತ್ತರ ಕರ್ನಾಟಕ ಭಾಗದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಕರ್ನಾಟಕ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಾಗೂ ಇತರ ಮುಖಂಡರು ಮತ್ತೂಮ್ಮೆ ಪರೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು. ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೂ ಕಾರಣವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next