Advertisement

ಸುಪ್ರೀಂ ತೀರ್ಪು ಬರೋವರೆಗೆ ಕಾಯಲಾಗದು: ಪೇಜಾವರ ಶ್ರೀ

06:20 AM Dec 08, 2018 | Team Udayavani |

ಎನ್‌.ಆರ್‌.ಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸುಪ್ರೀಂಕೋರ್ಟ್‌ನ ತೀರ್ಪು ಬರುವವರೆಗೆ ಕಾಯಲು ಸಾಧ್ಯವಿಲ್ಲ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು ತಿಳಿಸಿದರು.

Advertisement

ತಾಲೂಕಿನ ಸೀತೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಎಲ್ಲಾ ಹಿಂದೂಗಳ ಆಗ್ರಹವಾಗಿದ್ದು, ಈ ಬಗ್ಗೆ ಪ್ರಧಾನಿ ಮಂತ್ರಿಯನ್ನು ಒತ್ತಾಯಿಸಲಾಗುವುದು ಎಂದರು.

ರಾಮ ಮಂದಿರ ನಿರ್ಮಾಣ ನಮ್ಮ ಆದ್ಯತೆಯಲ್ಲ ಎಂದು ಸುಪ್ರೀಂ ಕೋರ್ಟ್‌ ಈಗಾಗಲೇ ತಿಳಿಸಿದೆ. ಆದರೆ ರಾಮ ಮಂದಿರ ನಿರ್ಮಿಸಬೇಕು ಎಂಬುದು ಭಾರತದ ಕೋಟ್ಯಂತರ ಜನರ ಆಗ್ರಹವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ತಕ್ಷಣ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಿ ಸುಗ್ರೀವಾಜ್ಞೆ ಹೊರಡಿಸಬೇಕು. ಅದಾಗದಿದ್ದರೆ ನ್ಯಾಯಾಲಯದ ಹೊರಗೆ ಎರಡು ಧರ್ಮದ ಮುಖಂಡರನ್ನು ಕರೆಸಿ ಸಂಧಾನ ಸಭೆ ನಡೆಸಬೇಕು ಎಂದರು.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಉದ್ಭವಿಸಿದ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡಿದ ಶ್ರೀಗಳು, ಹಲವು ದೇವಸ್ಥಾನಗಳಲ್ಲಿ ವಿವಿಧ ಸಂಪ್ರದಾಯವಿರುತ್ತದೆ. ಕೃಷ್ಣ, ರಾಮ, ಗಣಪತಿ ದೇವಾಲಯಗಳಲ್ಲಿ ಸ್ತ್ರೀಯರಿಗೆ ಮುಕ್ತ ಪ್ರವೇಶವಿದೆ. ಆದರೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಸಂಪ್ರದಾಯವಿದೆ. ಯಾವುದೇ ಸರ್ಕಾರವಾಗಲಿ ಸಂಪ್ರದಾಯಕ್ಕೆ ಗೌರವ ನೀಡಬೇಕು ಎಂದು ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next