Advertisement

ಸುಪ್ರೀಂನಿಂದ ಗೋವಾದ 88 ಗಣಿ ಪರವಾನಗಿ ರದ್ದು

08:15 AM Feb 08, 2018 | |

ನವದೆಹಲಿ/ಪಣಜಿ: ಗೋವಾದಲ್ಲಿ 2015ರಲ್ಲಿ ಗಣಿಗಾರಿಕೆಗಾಗಿ ನೀಡಲಾಗಿದ್ದ 88 ಪರವಾನಗಿಗಳನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದು ಮಾಡಿದೆ. ಕೇಂದ್ರ ಮತ್ತು ಗೋವಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿರುವ ನ್ಯಾಯಮೂರ್ತಿಗಳಾದ ಮದನ್‌ ಬಿ. ಲೋಕುರ್‌, ದೀಪಕ್‌ ಗುಪ್ತಾ ಅವರನ್ನೊಳಗೊಂಡ ಪೀಠ ಹೊಸತಾಗಿ ಪರಿಸರ ಅನುಮತಿ ನೀಡುವಂತೆ ಸೂಚಿಸಿದ್ದಾರೆ. ಜತೆಗೆ 2ನೇ ಬಾರಿಗೆ ನವೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಾನೂನಿಗೆ ಅನುಗುಣವಾಗಿ ಗೋವಾ ಸರ್ಕಾರ ಪುನಃ ಗಣಿಗಾರಿಕೆಗೆ ಅನುಮತಿ ನೀಡಬಹುದು ಎಂದಿದೆ. 

Advertisement

ಸುಪ್ರೀಂಕೋರ್ಟ್‌ನ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಮನೋಹರ ಪರ್ರಿಕರ್‌ ಗಣಿ ಉದ್ಯಮಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಮಾ.15ರ ವರೆಗೆ ಯಾವುದೇ ತೊಂದರೆ ಇಲ್ಲ. ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇದೇ ವೇಳೆ  ತೀರ್ಪಿನ ಬಗ್ಗೆ ಗೋವಾ ಗಣಿ ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next