Advertisement

ಕೊವಿಡ್ ಸೋಂಕು ಪತ್ತೆ: ಬಡವರಿಗಷ್ಟೇ ಉಚಿತ ಪರೀಕ್ಷೆ: ಸುಪ್ರೀಂ

02:46 AM Apr 14, 2020 | Hari Prasad |

ನವದೆಹಲಿ: ಬಡವರು ಹಾಗೂ ನಿರ್ಗತಿಕರು ಮಾತ್ರ ಖಾಸಗಿ ಪ್ರಯೋಗಾಲಯಗಳು ನಡೆಸುವ ಕೋವಿಡ್ 19 ವೈರಸ್‌ ಸೋಂಕಿನ ಉಚಿತ ಪರೀಕ್ಷೆಯ ಪ್ರಯೋಜನ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

Advertisement

ಉಚಿತ ಪರೀಕ್ಷೆಗೆ ಸಂಬಂಧಿಸಿದಂತೆ ಈ ಮೊದಲು ತಾನು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಡಾ. ಕುಶಾಲ್‌ ಕಾಂತ್‌ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮತ್ತು ಬಡತನ ರೇಖೆಗಿಂತಲೂ ಕೆಳಗಿರುವ ಕಡುಬಡವರಿಗೆ ಮಾತ್ರ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್ ಸೋಂಕಿನ ಉಚಿತ ಪರೀಕ್ಷೆ ನಡೆಸಬೇಕು. ಉಳಿದವರು ಹಣ ಕೊಟ್ಟು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆದೇಶಿಸಿದೆ.

ಪಿಎಂಜೆಎವೈ ಫಲಾನುಭವಿಗಳಿಗೆ ಖಾಸಗಿ ಪ್ರಯೋಗಾಲಯಗಳಲ್ಲಿ ಈಗಾಗಲೇ ಕೋವಿಡ್ 19 ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಪ್ರಮಾಣಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಬಳಿಕ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು, ಖಾಸಗಿ ಪ್ರಯೋಗಾಲಯಗಳಲ್ಲಿ ಈಗಾಗಲೇ ಉಚಿತ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಕುರಿತು ಸಲ್ಲಿಸಲಾಗಿ ರುವ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಐಸಿಎಂಆರ್‌ ನ್ಯಾಯಾಲಯವನ್ನು ಕೋರಿತ್ತು.

Advertisement

Udayavani is now on Telegram. Click here to join our channel and stay updated with the latest news.

Next