ನವ ದೆಹಲಿ : ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮೇಲೆ ದಾಖಲಾಗಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಸುಪ್ರೀಂ ಕೋರ್ಟ್ ಇಂದು ಅಂತಿಮ ಚುಕ್ಕಿ ಇಟ್ಟಿದೆ.
ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ನೇತೃತ್ವದ ಮೂವರು ಸದಸ್ಯರ ಸಮಿತಿ, ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿ, ಉನ್ನತ ನ್ಯಾಯಾಲಯವು ಮಾಜಿ ಸಿಜೆಐ ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ಪೂರ್ಣಗೊಳಿಸಿ ಗೊಗೊಯ್ ಅವರನ್ನು ದೋಷಮುಕ್ತಗೊಳಿಸಿದೆ.
ಓದಿ : ಮೋದಿ ಶಕ್ತಿ ಕುಗ್ಗಿಸಲು RJD, ಕಾಂಗ್ರೆಸ್ ಗೆ ವಿಜಯೇಂದ್ರ ಹಣ ನೀಡಿದ್ದಾರೆ: ಯತ್ನಾಳ್ ಬಾಂಬ್
ಮಾಜಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧ ಷಡ್ಯಂತ್ರವಿತ್ತು ಮತ್ತು ಆ ವಿಚಾರವನ್ನು ತೆಗೆದುಹಾಕುವುದಕ್ಕೆ ಸಾಧ್ಯವಿಲ್ಲವೆಂದು ಜಸ್ಟ್ಇಸ್ ಪಟ್ನಾಯಕ್ ವರದಿ ತಿಳಿಸಿದೆ ಎಂದು ಹೇಳುವುದರೊಮದಿಗೆ ವಾಟ್ಸ್ಯಾಪ್ ಹಾಗೂ ಇತರೆ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ ಎಂದು ಕೋರ್ಟ್ ತಿಳಿಸಿದೆ.
ಇನ್ನು, ರಂಜನ್ ಗೊಗೊಯ್ ಅವರು ಪೌರತ್ವ ಕಾಯ್ದೆಗೆ ಸಂಬಂಧಿಸಿದ ಕೆಲವು ಪ್ರಕರಣಗಳಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವುದರಿಂದ ಅಸಂತುಷ್ಟರಾಗಿರಬಹುದು ಎಂಬುವುದಕ್ಕೆ ಹಲವು ಬಲವಾದ ಸಾಕ್ಷಿಗಳಿವೆ ಎಂದು ಗುಪ್ತಚರ ಇಲಾಖೆಯ ನಿರ್ದೇಶಕರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?