ನವದೆಹಲಿ: ಕರ್ನಾಟಕ ಮೂಲದ ಪ್ರಸ್ತುತ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಅರವಿಂದ್ ಕುಮಾರ್ ಮತ್ತು ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಆರು ಸದಸ್ಯರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಕೊಲಿಜಿಯಂ ಸರ್ವಾನುಮತದಿಂದ ಇವರಿಬ್ಬರ ಹೆಸರುಗಳನ್ನು ಶಿಫಾರಸು ಮಾಡಿದೆ. ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ 27 ನ್ಯಾಯಮೂರ್ತಿಗಳಿದ್ದು, ಏಳು ಹುದ್ದೆಗಳು ಖಾಲಿ ಇವೆ.
ಕರ್ನಾಟಕದವರಾದ ನ್ಯಾ. ಅರವಿಂದ್ ಕುಮಾರ್ ಅವರನ್ನು 2009ರ ಜೂ.29ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಯಿತು. ನಂತರ 2012ರ ಡಿ.17ರಂದು ಕಾಯಂ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ಬಳಿಕ 2021ರ ಅ.13ರಂದು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅರವಿಂದ್ ಕುಮಾರ್ ಅವರನ್ನು ನೇಮಿಸಲಾಯಿತು.