ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ ಎಸ್ ನಾಯಕಿ ಕೆ.ಕವಿತಾಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಶುಕ್ರವಾರ (ಮಾರ್ಚ್ 22) ನಿರಾಕರಿಸಿದೆ.
ಇದನ್ನೂ ಓದಿ:LS Poll: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ
ತೆಲಂಗಾಣದ ಭಾರತ್ ರಾಷ್ಟ್ರ ಸಮಿತಿ ಪಕ್ಷದ ವಿಧಾನಪರಿಷತ್ ಸದಸ್ಯೆಯಾಗಿರುವ ಕವಿತಾ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕವಿತಾ ಅವರನ್ನು ಶನಿವಾರ ಬಂಧಿಸಿತ್ತು.
ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಕವಿತಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದು, ವಿಚಾರಣಾ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಸುಪ್ರೀಂಕೋರ್ಟ್ ಮೆಟ್ಟಿಲೇರುವ ಮೊದಲು ಕಾನೂನು ಪಾಲನೆ ದೃಷ್ಟಿಯಲ್ಲಿ ವಿಚಾರಣಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ವಿಶೇಷ ಪೀಠದ ಜಸ್ಟೀಸ್ ಸಂಜೀವ್ ಖನ್ನಾ, ಜಸ್ಟೀಸ್ ಎಂಎಂ ಸುಂದರೇಶ್ ಮತ್ತು ಜಸ್ಟೀಸ್ ಬೇಲಾ ತ್ರಿವೇದಿ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.