ನವದೆಹಲಿ: ನೋಟು ಅಮಾನ್ಯಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ, ಆರ್ಬಿಐಗೆ ಬುಧವಾರ ಸೂಚನೆ ನೀಡಿದೆ.
ಜತೆಗೆ ಅರ್ಜಿದಾರರು ಹಾಗೂ ಪ್ರತಿವಾದಿಗಳು ಡಿ.10ರ ಒಳಗಾಗಿ ಲಿಖೀತವಾಗಿ ತಮ್ಮ ಅಭಿಪ್ರಾಯಗಳನ್ನು ಒಪ್ಪಿಸಬೇಕು ಎಂದು ನ್ಯಾ.ಎಸ್.ಎ.ನಜೀರ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಸೂಚನೆ ನೀಡಿದೆ.
ಅದರ ಜತೆಗೆ ನೋಟು ಅಮಾನ್ಯ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಕೇಂದ್ರ ಸರ್ಕಾರದ ಪರ ವಾದಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಮೊಹರು ಮಾಡಿದ ಲಕೋಟೆಯಲ್ಲಿ ದಾಖಲೆಗಳನ್ನು ಸಲ್ಲಿಸುವುದಾಗಿ ಹೇಳಿದ್ದಾರೆ.