ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಚುನಾವಣೆ ಫಲಿತಾಂಶ ಸಂಬಂಧಿಸಿದಂತೆ ತುಳಸಿ ಮುನಿರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಲಾಗಿದೆ. ಇದರಿಂದ ರಾಜರಾಜೇಶ್ವರಿ ನಗರದ ಉಪಚುನಾವಣೆ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ.
2018ರ ಆರ್.ಆರ್.ನಗರದ ಚುನಾವಣೆಯಲ್ಲಿ ಮುನಿರತ್ನ ಚುನಾವಣಾ ಅಕ್ರಮ ಎಸಗಿ ಜಯ ಗಳಿಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ರಾಜ್ಯದ ಹೈಕೋರ್ಟ್ ಮೊದಲು ಇತ್ಯರ್ಥಪಡಿಸಲಿ. ಅಲ್ಲಿಯವರೆಗೆ ಉಪಚುನಾವಣೆ ನಡೆಸಬಾರದು ಎಂದು ಬಿಜೆಪಿಯ ತುಳಸಿ ಮುನಿರಾಜು ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಸುಪ್ರೀಂ ಇಂದು ವಜಾ ಮಾಡಿದೆ.
ಇದನ್ನೂ ಓದಿ:ಸಂತೋಷದಿಂದ, ಸಂಪೂರ್ಣ ಒಪ್ಪಿಗೆಯಿಂದ ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದೇನೆ: ರಾಮುಲು
ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರದಲ್ಲಿ ನಕಲಿ ವೋಟರ್ ಐಡಿಗಳು ಪತ್ತೆಯಾಗಿದ್ದವು. ಚುನಾವಣೆಯಲ್ಲಿ ಮುನಿರತ್ನ ಅಕ್ರಮವೆಸಗಿ ಜಯಗಳಿಸಿದ್ದರು ಎಂದು ಅವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ತುಳಸಿ ಮುನಿರಾಜು ದೂರು ಸಲ್ಲಿಸಿದ್ದರು.
ಸದ್ಯ ಮುನಿರತ್ನ ಕೂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆರ್.ಆರ್.ನಗರ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಬಿಜೆಪಿ ಪಕ್ಷವು ಮುನಿರತ್ನ ಮತ್ತು ಮುನಿರಾಜು ಇಬ್ಬರ ಹೆಸರನ್ನೂ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದೆ. ಆದರೆ ಇದುವರೆಗೂ ಟಿಕೆಟ್ ಅಂತಿಮವಾಗಿಲ್ಲ.