ಬೆಂಗಳೂರು: ಸಚಿವ ಸ್ಥಾನ ಸಿಗಲೇಬೇಕು ಎಂದು ಕಾದುಕುಳಿತಿದ್ದ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರಚಿದೆ. ನಾಮ ನಿರ್ದೇಶನದ ಆಧಾರದ ಮೇಲೆ ಸಚಿವ ಸ್ಥಾನ ನೀಡಿಬಾರದು ಎಂದು ಕರ್ನಾಟಕ ಹೈಕೋರ್ಟ್ ನ ತೀರ್ಮಾನವನ್ನು ಸುಪ್ರೀಂ ಎತ್ತಿ ಹಿಡಿದಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ವಿಶ್ವನಾಥ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿ, ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಿತು.
ಇದನ್ನೂ ಓದಿ:ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ
ಅನ್ಯ ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದ ಶಾಸಕರ ಕುರಿತಾಗಿ ತೀರ್ಪು ನೀಡಿದ್ದ ಸಂದರ್ಭದಲ್ಲಿ, ಸಚಿವ ಪದವಿಗಾಗಿ ಜನರಿಂದ ಆಯ್ಕೆಯಾಗಬೇಕು. ನಾಮನಿರ್ದೇಶನಗೊಂಡ ಶಾಸಕರಿಗೆ ಸಚಿವ ಸ್ಥಾನ ನೀಡಲಾಗದು ಎಂದು ಹೈಕೋರ್ಟ್ ಹೇಳಿತ್ತು.
Related Articles
ವಿಶ್ವನಾಥ್ ಅವರು ಉಪಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇದಾದ ಬಳಿಕ ಅವರನ್ನು ಸಾಹಿತ್ಯ ಕೋಟಾದಲ್ಲಿ ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿತ್ತು.