Advertisement

ನ್ಯಾ.ಡಿ.ವೈ.ಚಂದ್ರಚೂಡ್‌ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

09:26 PM Nov 02, 2022 | Team Udayavani |

ನವದೆಹಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್‌ ಅವರು ನ.9ರಂದು ಪ್ರಮಾಣ ವಚನ ಸ್ವೀಕರಿಸದಂತೆ ತಡೆಯಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.

Advertisement

ಕೇವಲ ದುರುದ್ದೇಶದ ಕಾರಣದಿಂದಲೇ ಈ ಅರ್ಜಿ ಸಲ್ಲಿಸಲಾಗಿದೆ. ಆ ಅರ್ಜಿಯಲ್ಲಿ ಉಲ್ಲೇಖೀಸಲಾಗಿರುವ ಅಂಶಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರನ್ನೊಳಗೊಂಡ ನ್ಯಾಯಪೀಠ ಬುಧವಾರ ಅಭಿಪ್ರಾಯಪಟ್ಟಿದೆ.

ಅದಕ್ಕಿಂತ ಮೊದಲು, ಮುಖ್ಯ ನ್ಯಾಯಮೂರ್ತಿ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಸಮ್ಮತಿ ನೀಡಿತ್ತು.

ಸುಪ್ರೀಂಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರು ನ.8ರಂದು ನಿವೃತ್ತರಾಗಲಿದ್ದು, ನ.9ರಂದು ನ್ಯಾ.ಡಿ.ವೈ.ಚಂದ್ರಚೂಡ್‌ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next