Advertisement

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

11:11 PM Nov 18, 2024 | Team Udayavani |

ನವದೆಹಲಿ: ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಸಾವಿನ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

Advertisement

“ಸರ್ಕಾರ ನಡೆಸುವುದು ನ್ಯಾಯಾಲಯದ ಕೆಲಸವಲ್ಲ. ಹಾಗೆಯೇ ಸುಪ್ರೀಂ ಕೋರ್ಟ್‌ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ’ ಎಂದು ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.

ಈ ಹಿಂದೆಯೂ ಅರ್ಜಿದಾರರು ತಮ್ಮ ಅರ್ಜಿಯೊಂದರಲ್ಲಿ ಗಾಂಧೀಜಿಯನ್ನು ಉಲ್ಲೇಖಿಸಿದ್ದ ಹಿನ್ನೆಲೆಯಲ್ಲಿ, “ಪ್ರಸಕ್ತ ಜೀವಂತವಿರದ ವ್ಯಕ್ತಿಗಳ ವಿರುದ್ಧ ಬೇಜವಾಬ್ದಾರಿತನದ ಆರೋಪಗಳನ್ನು ಹೊರಿಸಲಾಗಿದೆ. ಆದ್ದರಿಂದ ಅರ್ಜಿದಾರರ “ವಿಶ್ವಾಸಾರ್ಹತೆ’ ಪರೀಕ್ಷೆ ನಡೆಸಬೇಕಾಗಿದೆ ಎಂದು ಸುಪ್ರೀಂ ಹೇಳಿತ್ತು.

Advertisement

Udayavani is now on Telegram. Click here to join our channel and stay updated with the latest news.

Next