Advertisement

ರಾಷ್ಟ್ರಪತಿಯಿಂದ ಸಂಸತ್ ಭವನ ಉದ್ಘಾಟನೆಗೆ ಮನವಿ: ಅರ್ಜಿ ವಜಾಗೊಳಿಸಿದ Supreme Court

12:42 PM May 26, 2023 | Team Udayavani |

ಹೊಸದಿಲ್ಲಿ: ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

Advertisement

“ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. “ನಾವು ನಿಮ್ಮ ಮೇಲೆ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ” ಎಂದು ಪೀಠವು ಹೇಳಿದೆ.

ನ್ಯಾಯವಾದಿ ಜಯ ಸುಕಿನ್‌ ಎಂಬುವರು ಈ ಬಗ್ಗೆ ದಾವೆ ಹೂಡಿದ್ದರು. ಮೇ 18ರಂದು ಲೋಕಸಭೆಯ ಸೆಕ್ರೆಟರಿ ಜನರಲ್‌ ಬಿಡುಗಡೆ ಮಾಡಿರುವ ಆಹ್ವಾನ ಪತ್ರಿಕೆ ದೇಶದ ಸಂವಿಧಾನವನ್ನು ಉಲ್ಲಂಘಿಸುತ್ತಿದೆ. ರಾಷ್ಟ್ರಪತಿ ದೇಶದ ಪ್ರಥಮ ಪ್ರಜೆ ಮತ್ತು ಅವರು ಸಂಸತ್‌ ನ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದಂತೆ ಎಲ್ಲಾ ನಿರ್ಧಾರಗಳನ್ನು ರಾಷ್ಟ್ರಪತಿಗಳ ಹೆಸರಿನಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿಗಳು ಸಂಸತ್‌ನ ಅವಿಭಾಜ್ಯ ಅಂಗ. ಹೀಗಾಗಿ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತೆ ಇಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯಾಲಯಕ್ಕೆ ಹೊಸ ಸಂಸತ್‌ ಭವನವನ್ನು ರಾಷ್ಟ್ರಪತಿಗಳಿಂದ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು. 20 ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next