Advertisement

ಮಹಿಳೆಯರೂ ರೇಪ್‌ ಮಾಡಿದರೆ ಶಿಕ್ಷೆ: ಅರ್ಜಿ ವಜಾ

11:05 AM Feb 03, 2018 | Karthik A |

ಹೊಸದಿಲ್ಲಿ: ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಮಹಿಳೆಯರನ್ನೂ ಶಿಕ್ಷಿಸುವ ಸಂಬಂಧ ಕಾನೂನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಲಾದ ದೂರನ್ನು ಸುಪ್ರೀಂಕೋರ್ಟ್‌ ತಳ್ಳಿಹಾಕಿದೆ. ಸಾಮಾಜಿಕ ಅಗತ್ಯಕ್ಕೆ ತಕ್ಕಂತೆ ಇದಕ್ಕೆ ತಿದ್ದುಪಡಿ ಮಾಡುವುದು ಸಂಸತ್‌ಗೆ ಬಿಟ್ಟ ವಿಚಾರ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. ಇದೊಂದು ಭ್ರಮಾತ್ಮಕ ಸನ್ನಿವೇಶ. ಹೀಗಾಗಿ ಕೋರ್ಟ್‌ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next