ನವದೆಹಲಿ:ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಎತ್ತಿಹಿಡಿದು ದೆಹಲಿ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
Advertisement
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ, “ಸರಿಯಾದ ರೀತಿಯಲ್ಲಿಯೇ ಯೋಜನೆ ಇದೆ. ಇದು ನಿರಂಕುಶವಾಗಿಲ್ಲ. ಎಲ್ಲ ಅಂಶಗಳನ್ನು ಪರಿಗಣಿಸಿಯೇ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ನಾವು ನೇಮಕ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ’ ಎಂದು ಹೇಳಿದೆ.