Advertisement

Gujarat Riots Case; ತೀಸ್ತಾ ಸೆಟಲ್ವಾಡ್ ಮಧ್ಯಂತರ ಜಾಮೀನು ಜುಲೈ 19 ರವರೆಗೆ ವಿಸ್ತರಣೆ

04:05 PM Jul 05, 2023 | |

ನವದೆಹಲಿ: 2002ರ ಗುಜರಾತ್‌ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರ ಮಧ್ಯಂತರ ಜಾಮೀನನ್ನು ಜುಲೈ 19 ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

Advertisement

2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಟಾಪ್ ಕಾಪ್ ಆರ್ಬಿ ಶ್ರೀಕುಮಾರ್ ಅವರನ್ನು ಸುಳ್ಳು ಸಾಕ್ಷ್ಯಾಧಾರ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಜೂ. 25, 2022 ರಂದು ಬಂಧಿಸಲಾಯಿತು.

ತೀಸ್ತಾ ಸೆಟಲ್ವಾಡ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಕೂಡಲೇ ಪೊಲೀಸರಿಗೆ ಶರಣಾಗಬೇಕು ಎಂದು ಗುಜರಾತ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜುಲೈ 1ರಂದು ತಡೆಯಾಜ್ಞೆ ನೀಡಿತ್ತು. ಈಗ ಗುಜರಾತ್ ಹೈಕೋರ್ಟ್ ಆದೇಶಕ್ಕೆ ನೀಡಿದ ತಡೆಯಾಜ್ಞೆಯು ಜುಲೈ 19ರವರೆಗೆ ವಿಸ್ತರಣೆಯಾಗಿದೆ.

ಇದನ್ನೂ ಓದಿ: ಸುರತ್ಕಲ್‌: ಅಭಿವೃದ್ಧಿ ಕಾಮಗಾರಿಗಾಗಿ ಬಸ್‌ನಿಲ್ದಾಣ ತೆರವು; ಜನರಿಗೆ ಸಂಕಷ್ಟ

Advertisement

Udayavani is now on Telegram. Click here to join our channel and stay updated with the latest news.

Next