Advertisement

PM ಮೋದಿ ಭದ್ರತಾ ಲೋಪ ಪ್ರಕರಣದ ತನಿಖೆ ನಡೆಸಲು ಸ್ವತಂತ್ರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

01:07 PM Jan 10, 2022 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಪಂಜಾಬ್ ಗೆ ತೆರಳಿದ್ದಾಗ ಫಿರೋಜ್ ಪುರದಲ್ಲಿ ಸಂಭವಿಸಿದ ಭದ್ರತಾ ಲೋಪ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ (ಜನವರಿ 10) ಸ್ವತಂತ್ರ ಸಮಿತಿಯನ್ನು ರಚಿಸಿ ಆದೇಶ ನೀಡಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಕಾಡುತ್ತಿದೆ ಕೋವಿಡ್ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ

ಪಂಜಾಬ್ ನಲ್ಲಿ ನಡೆದ ಪ್ರಧಾನಿ ಮೋದಿ ಅವರ ಭದ್ರತಾ ವೈಫಲ್ಯದ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಮಾಜಿ ಜಡ್ಜ್ ನೇತೃತ್ವದ ಸಮಿತಿ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಕಳೆದ ವಾರ ಪಂಜಾಬ್ ನಲ್ಲಿ ಸಂಭವಿಸಿದ ಪ್ರಧಾನಿ ಮೋದಿ ಅವರ ಭದ್ರತಾ ವೈಫಲ್ಯದ ಕುರಿತು ನಡೆಸಲಿರುವ ಸ್ವತಂತ್ರ ತನಿಖಾ ಸಮಿತಿಯಲ್ಲಿ ಚಂಡೀಗಢದ ಡಿಜಿಪಿ, ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಐಜಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್, ಪಂಜಾಬ್ ನ ಎಡಿಜಿಪಿ ಇರಲಿದ್ದಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಶುಕ್ರವಾರ ನಡೆದಿದ್ದ ಈ ಕುರಿತ ವಿಚಾರಣೆ ವೇಳೆ ನ್ಯಾಯಪೀಠವು ಪ್ರಧಾನಿಯ ಪಂಜಾಬ್ ಪ್ರವಾಸ ಮತ್ತು ಭದ್ರತೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ವಶಪಡಿಸಿಕೊಂಡು ಸುರಕ್ಷಿತವಾಗಿಡುವಂತೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಗೆ ಸೂಚಿಸಿತ್ತು. ಅಲ್ಲದೇ ಜ.10ರಂದು ತಾನು ವಿಚಾರಣೆ ನಡೆಸುವವರೆಗೆ ತನಿಖೆ ನಿಲ್ಲಿಸಬೇಕೆಂದು ಕೇಂದ್ರ ಮತ್ತು ಪಂಜಾಬ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next