Advertisement

ವಿರಾಟ್ ನೌಕೆಯನ್ನು ಗುಜರಿಗೆ ಹಾಕದಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

09:58 PM Apr 12, 2021 | Team Udayavani |

ನವದೆಹಲಿ: ಭಾರತೀಯ ನೌಕಾಪಡೆಯ ಸೇವೆಯಿಂದ ನಿವೃತ್ತಿ ಹೊಂದಿರುವ ವಿರಾಟ್‌ ನೌಕೆಯನ್ನು ಮೂಲಸ್ವರೂಪದಲ್ಲೇ ಉಳಿಸಿಕೊಳ್ಳುವಂತೆ ಸೂಚನೆ ನೀಡಬೇಕೆಂದು ಶ್ರೀರಾಮ್‌ ಗ್ರೂಪ್‌ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

Advertisement

ಸೋಮವಾರ, ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ವಿಚಾರಣೆಯಲ್ಲಿ ಮಾತನಾಡಿದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ದೆ, ನ್ಯಾ. ಎ.ಎಸ್‌. ಬೋಪಣ್ಣ ಹಾಗೂ ನ್ಯಾ. ರಾಮಸುಬ್ರಹ್ಮಣ್ಯನ್‌ ಅವರುಳ್ಳ ಪೀಠ, ವಿರಾಟ್‌ ನೌಕೆಯನ್ನು ಗುಜರಿಗೆ ಹಾಕದಂತೆ ಅದನ್ನು ಮೂಲಸ್ವರೂಪದಲ್ಲೇ ಉಳಿಸಿಕೊಳ್ಳುವ ಪ್ರಸ್ತಾವನೆಯನ್ನು ಈಗಾಗಲೇ ರಕ್ಷಣಾ ಇಲಾಖೆ ತಿರಸ್ಕರಿಸಿದೆ.

ನಿಮ್ಮದೇ ಕಂಪನಿಯ (ಶ್ರೀರಾಮ್‌ ಗ್ರೂಪ್‌) ನಿಯೋಗ ಮಾಡಿದ್ದ ಮನವಿಯನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ. ಆದರೆ, ಮತ್ತೆ ನೀವು ಅರ್ಜಿ ಸಲ್ಲಿಸಲು ತಡ ಮಾಡಿದ್ದರಿಂದ ಅರ್ಜಿಯನ್ನು ಮಾನ್ಯ ಮಾಡಲಾಗದು” ಎಂದು ಹೇಳಿದೆ.

ಇದನ್ನೂ ಓದಿ :ರಫೇಲ್ ಖರೀದಿ ವೇಳೆ ಮಧ್ಯವರ್ತಿಗೆ ಹಣ ನೀಡಿಕೆ ಆರೋಪ‌ : ವಿಚಾರಣೆಗೆ ಸುಪ್ರೀಂ ಅಸ್ತು

Advertisement

Udayavani is now on Telegram. Click here to join our channel and stay updated with the latest news.

Next