ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಕೋರಿ ಸಿಬಿಐ ಬುಧವಾರ (ಮೇ17) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇಂದು ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.
ಇದನ್ನೂ ಓದಿ:Nonstop Cooking: ಸತತ 100 ಗಂಟೆಗಳ ಕಾಲ ಅಡುಗೆ ಮಾಡಿ ಗಿನ್ನೆಸ್ ದಾಖಲೆ ಬರೆದ ಹಿಲ್ಡಾ…
ಸಿಬಿಐ ತನಿಖೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವಿಗೆ ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್ ನಲ್ಲೇ ತಡೆಯಾಜ್ಞೆ ತೆರವಿಗೆ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದೆ.
ಹೈಕೋರ್ಟ್ ರಜೆ ಕಾಲಾವಧಿ ಮುಗಿಯುವುದರಿಂದ ಅಲ್ಲೇ ಮೇಲ್ಮನವಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಜುಲೈಗೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.