ನವದೆಹಲಿ: ಇತರೆ ಹಿಂದುಳಿದ ವರ್ಗ(ಒಬಿಸಿ) ಸಮುದಾಯಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅತಿದೊಡ್ಡ ಗೆಲುವು ಸಿಕ್ಕಿದೆ.
ಮಹಾರಾಷ್ಟ್ರದಲ್ಲಿ ಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಲು ಸರ್ವೋಚ್ಚ ನ್ಯಾಯಾಲಯ ಹಸಿರು ನಿಶಾನೆ ತೋರಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ಶೇ.27 ಮೀಸಲಾತಿ ಒದಗಿಸುವಂತೆ ಶಿಫಾರಸು ಮಾಡಿದ್ದ ಬಂಥಿಯಾ ಆಯೋಗದ ವರದಿಯನ್ನು ಸುಪ್ರೀಂ ನ್ಯಾಯಪೀಠ ಪುರಸ್ಕರಿಸಿದೆ.
ಹೀಗಾಗಿ, ಸದ್ಯದಲ್ಲೇ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಮತದಾನ ಪ್ರಕ್ರಿಯೆ ಆರಂಭಿಸುವಂತೆ ಕೇಂದ್ರ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ.
2 ವಾರಗಳೊಳಗಾಗಿ ಅಧಿಸೂಚನೆ ಹೊರಡಿಸುವಂತೆ ಆದೇಶಿಸಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು ಹೊರಬೀಳುತ್ತಿದ್ದಂತೆ, ಮಹಾರಾಷ್ಟ್ರದ ರಾಜಕೀಯ ಪಕ್ಷಗಳು ಹಾಗೂ ಒಬಿಸಿ ಸಮುದಾಯ ಸಂಭ್ರಮಾಚರಣೆ ನಡೆಸಿವೆ.