Advertisement

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

12:14 AM Nov 23, 2024 | Team Udayavani |

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸಂಸತ್ತು ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಕಾನೂನುಬಾಹಿರ ಎಂದು ಹೇಳಲಾಗದು ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಅಭಿಪ್ರಾಯ ವ್ಯಕ್ತಪಡಿಸಿದೆ.

Advertisement

ಸಂವಿಧಾನದ ಪ್ರಸ್ತಾವನೆಗೆ ಸಮಾಜವಾದ, ಜಾತ್ಯತೀತ ಪದ ಸೇರಿಸಿದ್ದನ್ನು ಪ್ರಶ್ನಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಜೆಐ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತೀರ್ಪು ಕಾಯ್ದಿರಿಸಿದೆ.

“42ನೇ ತಿದ್ದುಪಡಿಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ ಹಲವು ಬಾರಿ ನ್ಯಾಯಿಕ ವಿಮರ್ಶೆ ನಡೆಸಿದೆ. ಇದರಲ್ಲಿ ಸಂಸತ್ತು ಮಧ್ಯಪ್ರವೇಶ ಮಾಡಿದೆ. ಹಾಗೆಂದ ಮಾತ್ರಕ್ಕೆ ತುರ್ತು ಪರಿಸ್ಥಿತಿ ಸಮಯದಲ್ಲಿ ಸಂಸತ್ತು ಮಾಡಿದ್ದೆಲ್ಲವನ್ನು ತಪ್ಪು ಎಂದು ಹೇಳಲಾಗುವುದಿಲ್ಲ’ ಎಂದು ಸಿಜೆಐ ಸಂಜೀವ್‌ ಖನ್ನಾ ಹೇಳಿದ್ದಾರೆ.

1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ತರುವ ಮೂಲಕ ಪ್ರಸ್ತಾವನೆಗೆ ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದ ಸೇರ್ಪಡೆ ಮಾಡಲಾಗಿತ್ತು. ಇದರ ಮಾನ್ಯತೆ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ, ವಿಷ್ಣು ಶಂಕರ್‌ ಜೈನ್‌ ಮುಂತಾದವರು ಸುಪ್ರೀಂ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next