Advertisement

Eknath Shinde ಬಣದ ಶಾಸಕರ ಅನರ್ಹತೆ ಪ್ರಕರಣ: ಸ್ಪೀಕರ್​ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

05:44 PM Jul 14, 2023 | Team Udayavani |

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸೇರಿದಂತೆ ಶಿವಸೇನೆಯ ಶಾಸಕರ ವಿರುದ್ಧದ ಅನರ್ಹತೆ ವಿಚಾರವಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ವಿಧಾನಸಭಾ ಸ್ಪೀಕರ್ ಗೆ ನೋಟಿಸ್‌ ಜಾರಿ ಮಾಡಿದೆ.

Advertisement

ಅನರ್ಹ ಶಾಸಕರ ವಿಚಾರದಲ್ಲಿ ವಿಧಾನಸಭೆಯ ಸ್ವೀಕರ್‌ ತತ್‌ಕ್ಷಣದ ನಿರ್ಧಾರವನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಬೇಕೆಂದು ಒತ್ತಾಯಿಸಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕ ಸುನೀಲ್ ಪ್ರಭು ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠದ ಮುಂದೆ ಇಂದು ವಿಚಾರಣೆ ನಡೆಯಿತು. ಎರಡು ವಾರಗಳಲ್ಲಿ ವಿಧಾನಸಭೆ ಸ್ಪೀಕರ್‌ ಉತ್ತರ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಅನರ್ಹತೆಯ ವಿಷಯದ ಬಗ್ಗೆ ಉತ್ತರ ನೀಡುವಂತೆ ಉದ್ಧವ್ ಠಾಕ್ರೆ ಮತ್ತುಏಕನಾಥ್ ಶಿಂದೆ ಬಣದ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next