ನವದೆಹಲಿ: ಸುಪ್ರೀಂಕೋರ್ಟ್ ನ ಸುಮಾರು 44 ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕುತ್ತಿಗೆಗೆ ಶಾಲು ಬಿಗಿದು 13 ವರ್ಷದ ಬಾಲಕಿ ಸಾವು!
ವರದಿಯ ಪ್ರಕಾರ, ಸುಪ್ರೀಂಕೋರ್ಟ್ ನ ಹಲವು ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢಪಟ್ಟ ನಿಟ್ಟಿನಲ್ಲಿ ಪ್ರಕರಣಗಳ ಭೌತಿಕ ವಿಚಾರಣೆಯನ್ನು ಕೋರ್ಟ್ ಸ್ಥಗಿತಗೊಳಿಸಿದೆ. ಎಲ್ಲಾ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್ ನ ಎಲ್ಲಾ ಕೋಣೆಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಕೋರ್ಟ್ ಕಲಾಪ ಸ್ಥಗಿತಗೊಂಡ ಪರಿಣಾಮ ಎಲ್ಲಾ ಪೀಠಗಳಲ್ಲಿ 10.30ಕ್ಕೆ ನಿಗದಿಯಾಗಿದ್ದ ವಿಚಾರಣೆ 11.30ಕ್ಕೆ ನಡೆಯಲಿದೆ. ಅಲ್ಲದೇ 11ಗಂಟೆಗೆ ನಿಗದಿಯಾಗಿದ್ದ ವಿಚಾರಣೆ 12ಗಂಟೆಗೆ ಆರಂಭವಾಗಲಿದೆ ಎಂದು ಸುಪ್ರೀಂಕೋರ್ಟ್ ಸೋಮವಾರ(ಏಪ್ರಿಲ್ 12) ನಡೆಯಲಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 1,68,912 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿತ್ತು. ಇದು ಕಳೆದ ಏಳು ದಿನಗಳಲ್ಲಿನ ಗರಿಷ್ಠ ಪ್ರಮಾಣದ್ದಾಗಿದೆ. ಕೋವಿಡ್ ನಿಯಂತ್ರಣಕ್ಕೆ ಹಲವೆಡೆ ಮುಂಜಾಗ್ರತಾ ಕ್ರಮವಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.