Advertisement

ನೋಟಾ: ಕೇಂದ್ರದ ಅಭಿಪ್ರಾಯ ಕೋರಿದ ಸುಪ್ರೀಂ ಕೋರ್ಟ್

09:38 PM Mar 15, 2021 | Team Udayavani |

ನವದೆಹಲಿ: ಸಂಸತ್‌ ಅಥವಾ ರಾಜ್ಯ ವಿಧಾನಸಭೆಗಳ ಚುನಾವಣೆಗಳಲ್ಲಿ ಯಾವುದೇ ನಿರ್ದಿಷ್ಟ ಕ್ಷೇತ್ರದಲ್ಲಿ ನೋಟಾಕ್ಕೆ ಹೆಚ್ಚು ಮತಗಳು ಬಂದಿದ್ದರೆ, ಆ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು. ಆದರೆ, ಮರು ಚುನಾವಣೆಯಲ್ಲಿ ನೋಟಾ ತೀರ್ಪು ಬಂದಾಗ ನಿಂತಿದ್ದ ಅಭ್ಯರ್ಥಿಗಳನ್ನು ಹಾಗೂ ರಾಜಕೀಯ ಪಕ್ಷಗಳನ್ನು ಮತ್ತೆ ಕಣಕ್ಕಿಳಿಯದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆತ್ತಿಕೊಂಡಿದೆ.

Advertisement

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿರುವ ನ್ಯಾಯಪೀಠ, ಈ ನಿಟ್ಟಿನಲ್ಲಿ ಅಭಿಪ್ರಾಯ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ :ಕೋವಿಡ್ 19 : ಬೀದರನಲ್ಲಿ ಇಂದು 33 ಹೊಸ ಪ್ರಕರಣಗಳು ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next