ನವದೆಹಲಿ: ಉತ್ತರ ಪ್ರದೇಶ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ.
ಇದರೊಂದಿಗೆ ಉತ್ತರ ಪ್ರದೇಶದ ಸುಮಾರು 17 ಲಕ್ಷ ಮದರಸಾ ವಿದ್ಯಾರ್ಥಿಗಳಿಗೆ ಭಾರತದ ಸುಪ್ರೀಂ ಕೋರ್ಟ್ ಭಾರೀ ರಿಲೀಫ್ ನೀಡಿದಂತಾಗಿದೆ.
ಯುಪಿ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್-2004 ಅನ್ನು ರದ್ದುಗೊಳಿಸಿ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಶುಕ್ರವಾರ ಸುಪ್ರೀಂ ಕೋರ್ಟ್ ಇದಕ್ಕೆ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ರಾಜ್ಯದಲ್ಲಿ 16,000 ಮದರಸಾಗಳು ಮೊದಲಿನಂತೆ ಕಾರ್ಯನಿರ್ವಹಿಸಲಿವೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ ಈ ಕುರಿತಾಗಿ ನೋಟಿಸ್ ಜಾರಿ ಮಾಡಿದೆ. ಅಲ್ಲದೆ “ಮದರಸಾ ಮಂಡಳಿಯ ಉದ್ದೇಶವು ನಿಯಂತ್ರಕ ಸ್ವರೂಪದ್ದಾಗಿದೆ ಮತ್ತು ಹೈಕೋರ್ಟ್ ಹೇಳಿಕೆಯಂತೆ ಮದರಸಾ ಮಂಡಳಿಯು ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ ಎಂಬುದು ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರೊಂದಿಗೆ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿದೆ.
ಇದನ್ನೂ ಓದಿ: Haveri: ಮೋದಿ ಮತ್ತೆ ಪ್ರಧಾನಿಯಾದ ಬಳಿಕ ರಾಜ್ಯ ಸರ್ಕಾರಕ್ಕೆ ಉಳಿಗಾಲವಿಲ್ಲ: ಬೊಮ್ಮಾಯಿ