Advertisement

ಕಂತಿನಲ್ಲಿ ಪಿಂಚಣಿ ಪಾವತಿಗೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌

10:47 PM Feb 27, 2023 | Team Udayavani |

ನವದೆಹಲಿ:ಸಶಸ್ತ್ರ ಸೇನಾ ಪಡೆಯಲ್ಲಿ ಒನ್‌ ರ್‍ಯಾಂಕ್‌ ಒನ್‌ ಪೆನ್ಶನ್‌ ವ್ಯಾಪ್ತಿಯಲ್ಲಿ ನಿವೃತ್ತ ಯೋಧರಿಗೆ ಕಂತು ಕಂತಾಗಿ ಪಿಂಚಣಿ ಪಾವತಿ ಮಾಡುವುದಕ್ಕೆ ಸುಪ್ರೀಂಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದೆ.

Advertisement

ಈ ನಿಟ್ಟಿನಲ್ಲಿ ಜ.20ರಂದು ಹೊರಡಿಸಲಾಗಿದ್ದ ಪ್ರಕಟಣೆಯ ಬಗ್ಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಈ ಪ್ರಕಟಣೆ ವಾಪಸ್‌ ಪಡೆದುಕೊಳ್ಳುವಂತೆ ಸೂಚಿಸಿ. ಇಲ್ಲದೇ ಇದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯ ಆರೋಪದ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ರಕ್ಷಣಾ ಇಲಾಖೆ ಕಾರ್ಯದರ್ಶಿಗೆ ಎಚ್ಚರಿಕೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next