Advertisement

Kavitha’s bail ಕುರಿತು ಪ್ರತಿಕ್ರಿಯೆ: ರೇವಂತ್ ರೆಡ್ಡಿ ಹೇಳಿಕೆಗೆ ಸುಪ್ರೀಂ ತೀವ್ರ ಆಕ್ಷೇಪ

09:19 PM Aug 29, 2024 | Team Udayavani |

ಹೈದರಾಬಾದ್: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಿಆರ್ ಎಸ್ ನಾಯಕಿ ಕೆ.ಕವಿತಾ( BRS leader K Kavitha) ಅವರಿಗೆ ಜಾಮೀನು ನೀಡಿರುವ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ(Telangana Chief Minister Revanth Reddy) ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್( Supreme Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Advertisement

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಕೆ.ವಿ. ವಿಶ್ವನಾಥನ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಸಿಎಂ ರೆಡ್ಡಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

”ಮುಖ್ಯಮಂತ್ರಿಯೊಬ್ಬರಿಂದ ಇಂತಹ ಹೇಳಿಕೆಗಳು?, ಅವರು ನೀಡಿದ ಹೇಳಿಕೆಯ ರೀತಿಯನ್ನು ನೋಡಿ” ಎಂದು ನ್ಯಾಯಮೂರ್ತಿ ಗವಾಯಿ ಅವರು ಮುಖ್ಯಮಂತ್ರಿಯನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಸಿದ್ಧಾರ್ಥ್ ಲೂತ್ರಾ ಅವರಿಗೆ ಖಾರವಾಗಿ ಪ್ರಶ್ನಿಸಿದ್ದಾರೆ.

“ನಾವು ರಾಜಕೀಯ ಪಕ್ಷದೊಂದಿಗೆ ಸಮಾಲೋಚಿಸಿ ನಮ್ಮ ಆದೇಶವನ್ನು ರವಾನಿಸಬೇಕೇ? ಹೇಳಿಕೆಗೆ ಆಧಾರವಿರಬೇಕು. ಯಾರಾದರೂ ಟೀಕಿಸಿದರೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ, ನಮ್ಮ ಆತ್ಮಸಾಕ್ಷಿಯಂತೆ ನಾವು ನಮ್ಮ ಕರ್ತವ್ಯವನ್ನು ಮಾಡುತ್ತೇವೆ’ ಎಂದು ಕೋರ್ಟ್ ನ್ಯಾಯಮೂರ್ತಿ ತಿರುಗೇಟು ನೀಡಿದ್ದಾರೆ.

ರೇವಂತ್ ಹೇಳಿದ್ದೇನು?
“ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಸಿಗಲು 15 ತಿಂಗಳು ಬೇಕಾಯಿತು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ನೂ ಸಹ ಕಾಯುತ್ತಿದ್ದಾರೆ. ಆದರೂ, ಕವಿತಾ ಕೇವಲ ಐದು ತಿಂಗಳಲ್ಲಿ ಜಾಮೀನು ಪಡೆಯುವಲ್ಲಿ ಯಶಸ್ವಿಯಾದರು. ಇದು ಬಿಜೆಪಿಯ ತೆರೆಮರೆಯ ಬೆಂಬಲದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.” ಎಂದು ರೆಡ್ಡಿ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಮಾಡಿವೆ.

Advertisement

ರೇವಂತ್ ರೆಡ್ಡಿ ಆರೋಪಿಯಾಗಿರುವ 2015ರ ವೋಟಿಗಾಗಿ ನಗದು ಹಗರಣ ಪ್ರಕರಣದ ವಿಚಾರಣೆಯನ್ನು ತೆಲಂಗಾಣದಿಂದ ಭೋಪಾಲ್‌ಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿರುವಾಗ ಈ ಹೇಳಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next