Advertisement

ಏಕರೂಪದ ಸಮವಸ್ತ್ರ ಪದ್ಧತಿ: ಪಿಐಎಲ್‌ ತಳ್ಳಿಹಾಕಿದ ಸುಪ್ರೀಂ ಕೋರ್ಟ್‌

09:18 PM Sep 16, 2022 | Team Udayavani |

ನವದೆಹಲಿ: ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಏಕರೂಪದ ಸಮವಸ್ತ್ರ ಪದ್ಧತಿ ಅನುಷ್ಠಾನದ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚನೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌)ಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

Advertisement

ನ್ಯಾ. ಹೇಮಂತ್‌ ಗುಪ್ತ ಮತ್ತು ನ್ಯಾ. ಸುಧಾಂಶು ಧುಲಿಯಾ ಒಳಗೊಂಡ ನ್ಯಾಯಪೀಠ, ಇದು ತೀರ್ಪಿಗಾಗಿ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದಕ್ಕೂ ಮುನ್ನ ಪಿಐಎಲ್‌ ಅರ್ಜಿದಾರ ನಿಖೀಲ್‌ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್‌ ಭಾಟಿಯಾ, ಸಮಾನತೆ, ಭ್ರಾತೃತ್ವ ಮತ್ತು ರಾಷ್ಟ್ರೀಯ ಏಕೀಕರಣ ಉತ್ತೇಜಿಸಲು ವಸ್ತ್ರಸಂಹಿತೆ ಜಾರಿಗೊಳಿಸಬೇಕು.

ಇದೊಂದು ಸಾಂವಿಧಾನಿಕ ಸಮಸ್ಯೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು. ಕರ್ನಾಟಕದಲ್ಲಿ ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ನ್ಯಾ. ಹೇಮಂತ್‌ ಗುಪ್ತ ನೇತೃತ್ವದ ಇದೇ ನ್ಯಾಯಪೀಠ ಹಿಜಾಬ್‌ ಪ್ರಕರಣದ ವಿಚಾರಣೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next