Advertisement
ವಕೀಲರಾಗಿರುವ ಎಂ.ಎಲ್.ಶರ್ಮಾ ಅವರು ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಫ್ರಾನ್ಸ್‌ನ ಏರೋಸ್ಪೇಸ್ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ಈ ಡೀಲ್ ಅನ್ನು ತಮ್ಮ ಪರವಾಗಿ ಮಾಡಿಕೊಳ್ಳಲೆಂದು ಎರಡೂ ದೇಶಗಳ ಮಧ್ಯವರ್ತಿಗಳಿಗೆ 1 ಬಿಲಿಯನ್ ಯೂರೋ ಕೊಟ್ಟಿತ್ತು ಎಂಬ ಮಾಧ್ಯಮ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಲಾಗಿತ್ತು. ಪುನಃ ದಾಖಲೆ ಸಂಗ್ರಹಿಸಿ ತನಿಖೆ ನಡೆಸಲು ಆದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಆದರೆ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಜಾ ಮಾಡಿದೆ. Advertisement
ರಫೇಲ್ ತನಿಖೆಗೆ ಕೋರಿದ್ದ ಅರ್ಜಿ ವಜಾ: ಸುಪ್ರೀಂ ಕೋರ್ಟ್
10:31 PM Aug 29, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.