Advertisement

Control of services; ಸುಗ್ರೀವಾಜ್ಞೆಗೆ ತಡೆ ತರಲು ಸುಪ್ರೀಂ ಕೋರ್ಟ್‌ ನಕಾರ

06:44 PM Jul 10, 2023 | Shreeram Nayak |

ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ಮೇಲೆ ನಿಯಂತ್ರಣ ತರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಆಮ್‌ ಆದ್ಮಿ ಪಕ್ಷದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

Advertisement

ಸುಗ್ರೀವಾಜ್ಞೆಗೆ ತಡೆಯಾಜ್ಞೆ ತರಲು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ, ಈ ಕುರಿತು ಪ್ರತಿಕ್ರಿಯಿಸುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಕೇಂದ್ರ ಸರ್ಕಾರವು ಹೊರಡಿಸಿರುವ ಸುಗ್ರೀವಾಜ್ಞೆಯು ಅಸಾಂವಿಧಾನಿಕ ಪ್ರಕ್ರಿಯೆಯಾಗಿದೆ. ಅದರ ಅನುಷ್ಠಾನಕ್ಕೆ ಮಧ್ಯಂತರ ತಡೆ ತರುವಂತೆಯೂ ಮನವಿ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ನೇತೃತ್ವದ ನ್ಯಾಯಪೀಠ, ಸುಗ್ರೀವಾಜ್ಞೆಗೆ ತುರ್ತಾಗಿ ತಡೆಯಾಜ್ಞೆ ತರಲಾಗದು. ವಾದ-ಪ್ರತಿವಾದ ಆಲಿಸುವ ಮುನ್ನವೇ ಕ್ರಮ ಕೈಗೊಳ್ಳುವುದು ಬೇಡ. ನಾವು ಮೊದಲು ನೋಟಿಸ್‌ ಜಾರಿ ಮಾಡುತ್ತೇವೆ ಎಂದು ಹೇಳಿ, ಮುಂದಿನ ವಿಚಾರಣೆಯನ್ನು ಜು.17ಕ್ಕೆ ನಿಗದಿಪಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next