ನವದೆಹಲಿ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರಿಗೆ ಸಂಬಂಧಿಸಿದ ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಅಫಿಡವಿತ್ ಅನ್ನು ತೆಗೆದುಕೊಳ್ಳಲು ನಿರಾಕರಿಸಿದ ಕೋಲ್ಕತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ(ಜೂನ್ 25) ತಡೆ ನೀಡಿದೆ.
ಇದನ್ನೂ ಓದಿ:ಖುರ್ಚಿ ಉಳಿಸಿಕೊಳ್ಳಲು ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದ್ರು : ಸಿಎಂ
ಅಫಿಡವಿತ್ ದಾಖಲೆಗಳನ್ನು ಮರುಪರಿಶೀಲಿಸುವಂತೆ ಕೋರಿ ಹೈಕೋರ್ಟ್ ಗೆ ಹೊಸದಾಗಿ ಮನವಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಬಂಗಾಳ ಸರ್ಕಾರ ಮತ್ತು ಮೂಲೊಯ್ ಘಟಕ್ ಅವರಿಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಇಂದಿರಾ ಬ್ಯಾನರ್ಜಿ ಎಂಬ ಇಬ್ಬರು ನ್ಯಾಯಾಧೀಶರು ಈ ಪ್ರಕರಣದ ವಿಚಾರಣೆಯಿಂದ ಸ್ವತಃ ಹಿಂದೆ ಸರಿದ ನಂತರ ಸುಪ್ರೀಂಕೋರ್ಟ್ ಈ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ. ಕೊನೆಗೂ ಈ ಪ್ರಕರಣವನ್ನು ಮಂಗಳವಾರ ನ್ಯಾಯಮೂರ್ತಿ ವಿನೀತ್ ಶರಣ್ ಅವರು ಮರು ನಿಯೋಜನೆಗೆ ಸೂಚಿಸಿ, ಶುಕ್ರವಾರ ವಿಚಾರಣೆ ನಡೆಸುವಂತೆ ದಿನ ನಿಗದಿ ಮಾಡಿರುವುದಾಗಿ ವರದಿ ಹೇಳಿದೆ.
ಜೂನ್ 9ರಂದು ಮಮತಾ ಬ್ಯಾನರ್ಜಿ ಮತ್ತು ಘಟಕ್ ಸಲ್ಲಿಸಿದ್ದ ಅಫಿಡವಿತ್ ಅನ್ನು ಸಿಜೆ ರಾಜೇಶ್ ಬಿಂದಾಲ್ ನೇತೃತ್ವದ ಕೋಲ್ಕತಾ ಹೈಕೋರ್ಟ್ ನ ಐವರು ನ್ಯಾಯಾಧೀಶರ ಪೀಠ ಸ್ವೀಕರಿಸಲು ನಿರಾಕರಿಸಿತ್ತು.