ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವಾರು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ.
ಇದನ್ನೂ ಓದಿ:Theft 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು; ಸೊತ್ತು ಸಹಿತ ಬಂಧನ
ವಿಶೇಷ ಸ್ಥಾನಮಾನ ರದ್ದುಪಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಸುದೀರ್ಘ 16 ದಿನಗಳ ಕಾಲ ನಡೆದಿದ್ದು, ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪಂಚಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.
ಸುಪ್ರೀಂನ ಪಂಚಸದಸ್ಯ ಪೀಠದಲ್ಲಿ ಸಿಜೆಐ ಡಿವೈ ಚಂದ್ರಚೂಡ್ ಅವರನ್ನೊಳಗೊಂಡಂತೆ ಜಸ್ಟೀಸ್ ಸಂಜಯ್ ಕಿಶನ್ ಕೌಲ್, ಜಸ್ಟೀಸ್ ಸಂಜೀವ್ ಖನ್ನಾ, ಜಸ್ಟೀಸ್ ಬಿಆರ್ ಗವಾಯಿ ಮತ್ತು ಜಸ್ಟೀಸ್ ಸೂರ್ಯಕಾಂತ್ ಇದ್ದಿದ್ದು, ಪ್ರಕರಣದ ಕುರಿತು ಹಿರಿಯ ವಕೀಲರಾದ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣಿಯಮ್, ರಾಜೀವ್ ಧವನ್, ಝಾಫರ್ ಶಾ, ದುಷ್ಯಂತ್ ದವೆ ಹಾಗೂ ಇತರ ವಕೀಲರು ಮಂಡಿಸಿದ್ದ ವಾದ, ಪ್ರತಿವಾದವನ್ನು ಆಲಿಸಿದ್ದರು.
16 ದಿನಗಳ ಕಾಲ ನಡೆದ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ.ಗಿರಿ ಅವರ ವಾದವನ್ನು ಸುಪ್ರೀಂಕೋರ್ಟ್ ಆಲಿಸಿತ್ತು.