ಹೊಸದಿಲ್ಲಿ: ಅತ್ಯಾಚಾರ ಪ್ರಕರಣಗಳ ಕ್ಷಿಪ್ರ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಸಮಿತಿ ರಚಿಸಿದೆ. ಮುಖ್ಯ ನಾಯಮೂರ್ತಿ ಎಸ್.ಎ. ಬೋಬ್ಡೆ ಅವರು, ನ್ಯಾಯ ಮೂರ್ತಿಗಳಾದ ಸುಭಾಷ್ ರೆಡ್ಡಿ ಹಾಗೂ ಎಂ.ಆರ್. ಶಾ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತೆಲಂಗಾಣದಲ್ಲಿ ಇತ್ತೀಚೆಗೆ ಪಶು ವೈದ್ಯೆ ವಿರುದ್ಧ ನಡೆದ ಪೈಶಾಚಿಕ ಕೃತ್ಯದ ಬಳಿಕ ಅತ್ಯಾಚಾರಿಗಳಿಗೆ ತ್ವರಿತವಾಗಿ ಶಿಕ್ಷೆ ವಿಧಿಸುವಂತೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಇಂದು ವಿಚಾರಣೆ
ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅತ್ಯಾಚಾರಿಗಳಲ್ಲಿ ಒಬ್ಬನಾಗಿರುವ ಅಕ್ಷಯ ಕುಮಾರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆಗೆ ಬರಲಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ನಿರ್ಭಯಾ ತಾಯಿ ಅಕ್ಷಯ ಕುಮಾರ್ ಸಲ್ಲಿಕೆ ಮಾಡಿರುವ ಅರ್ಜಿಯ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನೂ ನಡೆಸಲಿದೆ. ಈ ತೀರ್ಪಿನ ಆಧಾರದಲ್ಲಿ ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಗಲ್ಲು ಶಿಕ್ಷೆ ಜಾರಿ ಬಗ್ಗೆ ತೀರ್ಮಾನವನ್ನು ಡಿ.18ರಂದು ಪ್ರಕಟಿಸಲಿದೆ.
ನಿರ್ಭಯ ಅತ್ಯಾಚಾರ ಪ್ರಕರಣ ಸಂಭವಿಸಿ ಸೋಮವಾರಕ್ಕೆ (ಡಿ.16) 7 ವರ್ಷ ಪೂರೈ ಸಿದ್ದು, ಆಕೆಯ ಪೂರ್ವಿಕರ ಗ್ರಾಮ ಬಲಿಯಾ ದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.