Advertisement

ಒಬಿಸಿ ಮೀಸಲು: ಯುಪಿ ಸರ್ಕಾರ ನಿರಾಳ

09:15 PM Jan 04, 2023 | Team Udayavani |

ನವದೆಹಲಿ: ಇತರೆ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲು ಕಲ್ಪಿಸದೇ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ಬುಧವಾರ ತಡೆ ನೀಡಿದೆ.

Advertisement

ಈ ಮೂಲಕ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನಿರಾಳತೆ ಸಿಕ್ಕಂತಾಗಿದೆ.

ಸಿಜೆಐ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ. ಪಿ.ಎಸ್‌.ನರಸಿಂಹ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಮಾ.31ರೊಳಗೆ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಇತರೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next